alex Certify
ಕನ್ನಡ ದುನಿಯಾ       Mobile App
       

Kannada Duniya

AIADMK ಯಿಂದ ಶಶಿಕಲಾಗೆ ಗೇಟ್ ಪಾಸ್

sasikalaaa-tn

ಚೆನ್ನೈ: ತಮಿಳುನಾಡಿನಲ್ಲಿ ಇಂದು ನಡೆದ ರಾಜಕೀಯ ಬೆಳವಣಿಗೆಯಲ್ಲಿ ಆಡಳಿತಾರೂಢ ಎ.ಐ.ಎ.ಡಿ.ಎಂ.ಕೆ. ಪಕ್ಷದ ಬಣಗಳು ವಿಲೀನವಾಗಿವೆ.

ಮಾಜಿಮುಖ್ಯಮಂತ್ರಿ ಪನ್ನೀರ್ ಸೆಲ್ವಂ ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಈ ಬೆಳವಣಿಗೆಗಳ ಬೆನ್ನಲ್ಲೇ ಪಕ್ಷದಿಂದ ವಿ.ಕೆ. ಶಶಿಕಲಾ ನಟರಾಜನ್ ಅವರನ್ನು ಉಚ್ಚಾಟಿಸಲು ಕ್ರಮ ಕೈಗೊಳ್ಳಲಾಗಿದೆ.

ಪಕ್ಷದ ಕಚೇರಿಯಲ್ಲಿ ಈ ಕುರಿತು ಮಾಹಿತಿ ನೀಡಿದ ರಾಜ್ಯಸಭೆ ಸದಸ್ಯ ಹಾಗೂ ಪಕ್ಷದ ಹಿರಿಯ ನಾಯಕ ಆರ್. ವೈತಿಲಿಂಗಮ್, ಪಕ್ಷದಿಂದ ಶಶಿಕಲಾ ಅವರನ್ನು ಉಚ್ಚಾಟಿಸಲು ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಮುಖ್ಯಮಂತ್ರಿ ಎಡಪ್ಪಾಡಿ ಕೆ. ಪಳನಿಸ್ವಾಮಿ ಅವರ ಬಣದೊಂದಿಗೆ ವಿಲೀನವಾಗುವ ಮೊದಲು, ಶಶಿಕಲಾ ಮತ್ತು ಟಿ.ಟಿ.ವಿ. ದಿನಕರನ್ ಅವರನ್ನು ಪಕ್ಷದಿಂದ ಉಚ್ಚಾಟಿಸಬೇಕೆಂಬುದು ಪನ್ನೀರ್ ಸೆಲ್ವಂ ಬಣದ ಪ್ರಮುಖ ಬೇಡಿಕೆಯಾಗಿತ್ತು. ಅದರಂತೆ ಶಶಿಕಲಾ ಅವರನ್ನು ಪಕ್ಷದಿಂದ ಹೊರಹಾಕಲಾಗುವುದು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...