alex Certify
ಕನ್ನಡ ದುನಿಯಾ       Mobile App
       

Kannada Duniya

ಮುಖ್ಯಮಂತ್ರಿ ಕಾರಿನ ಮೇಲೆ ಕಲ್ಲು ತೂರಾಟ

ತಮಿಳುನಾಡು ಮುಖ್ಯಮಂತ್ರಿ ಎಡಪ್ಪಾಡಿ ಕೆ. ಪಳನಿಸ್ವಾಮಿ ಪ್ರಯಾಣಿಸುತ್ತಿದ್ದ ಕಾರಿನ ಮೇಲೆ ಕಲ್ಲು ತೂರಿರುವ ಘಟನೆ ಬುಧವಾರ ರಾತ್ರಿ ನಡೆದಿದ್ದು, ಪೊಲೀಸರು ಈಗ ಪ್ರಕರಣದ ತನಿಖೆಗೆ ಮುಂದಾಗಿದ್ದಾರೆ.

ಕೊಯಮತ್ತೂರಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ಚೆನ್ನೈನಿಂದ ಕೊಯಮತ್ತೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದ ಮುಖ್ಯಮಂತ್ರಿಗಳು ಕಾರ್ಯಕ್ರಮದ ಬಳಿಕ ತಮ್ಮ ತವರು ಸೇಲಂ ಗೆ ತೆರಳುತ್ತಿದ್ದರು.

ಕೊಯಮತ್ತೂರಿನ ಗಡಿದಾಟಿ ತಿರುಪುರು ಜಿಲ್ಲೆಗೆ ಪಳನಿಸ್ವಾಮಿಯವರ ಕಾರು ಪ್ರವೇಶಿಸುತ್ತಿದ್ದಂತೆ ಕಲ್ಲೊಂದು ಅವರ ಕಾರಿನ ಮೇಲೆ ಬಿದ್ದಿದೆ. ಕೂಡಲೇ ಅಲರ್ಟ್ ಆದ ರಕ್ಷಣಾ ಸಿಬ್ಬಂದಿ ಅವರನ್ನು ಬೇರೊಂದು ಕಾರಿನಲ್ಲಿ ಸೇಲಂ ಗೆ ಕಳುಹಿಸಿಕೊಟ್ಟಿದ್ದಾರೆ.

ಮತ್ತೆ ಚೆನ್ನೈಗೆ ತೆರಳಲು ಪಳನಿಸ್ವಾಮಿಯವರು ಇದೇ ಮಾರ್ಗದಲ್ಲಿ ಬರಬೇಕಿದ್ದ ಕಾರಣ, ಆ ಸಂದರ್ಭದಲ್ಲಿ ಭಾರೀ ಭದ್ರತೆಯನ್ನು ಏರ್ಪಡಿಸಲಾಗಿತ್ತೆನ್ನಲಾಗಿದೆ. ಇದೀಗ ಹಿರಿಯ ಪೊಲೀಸ್ ಅಧಿಕಾರಿಗಳು, ಮುಖ್ಯಮಂತ್ರಿಗಳ ಕಾರಿನ ಮೇಲೆ ಕಲ್ಲು ಬಿದ್ದ ಘಟನೆ ಕುರಿತು ತನಿಖೆ ನಡೆಸಲು ಆದೇಶಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...