alex Certify
ಕನ್ನಡ ದುನಿಯಾ       Mobile App
       

Kannada Duniya

ಶಿಕ್ಷಕರಾಗಲು ಬಯಸುವವರಿಗೆ ಸಿಹಿ ಸುದ್ದಿ ಕೊಟ್ಟ ಕೇಂದ್ರ ಸರ್ಕಾರ

ಶಿಕ್ಷಕರಾಗಲು ಬಯಸುವವರಿಗೆ ಕೇಂದ್ರ ಸರ್ಕಾರ ಸಿಹಿ ಸುದ್ದಿ ನೀಡಿದೆ. ದ್ವಿತೀಯ ಪಿಯುಸಿ ಮುಗಿದ ತಕ್ಷಣ ವಿದ್ಯಾರ್ಥಿಗಳು 4 ವರ್ಷದ ಬಿ ಇಡಿ ಕೋರ್ಸ್ ಗೆ ಪ್ರವೇಶ ಪಡೆಯಬಹುದಾಗಿದ್ದು, ಇದರಿಂದಾಗಿ ವಿದ್ಯಾರ್ಥಿಗಳಿಗೆ ಒಂದು ವರ್ಷ ಉಳಿತಾಯವಾಗಲಿದೆ.

ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ ಈ ಪ್ರಸ್ತಾವನೆಗೆ ಸಮ್ಮತಿ ಸೂಚಿಸಿದೆ. ಕಾನೂನು ಅಭಿಪ್ರಾಯ ಪಡೆಯಲು ಈಗ ಪ್ರಸ್ತಾವನೆಯನ್ನು ಕಾನೂನು ಸಚಿವಾಲಯಕ್ಕೆ ಕಳುಹಿಸಿಕೊಟ್ಟಿದ್ದು, ಸಮ್ಮತಿ ಸಿಕ್ಕ ಬಳಿಕ ಮುಂದಿನ ವರ್ಷದಿಂದಲೇ ಇದು ಜಾರಿಗೆ ಬರಲಿದೆ.

ಇದುವರೆಗೂ ಬಿ ಇಡಿ ವ್ಯಾಸಂಗ ಮಾಡಲು ವಿದ್ಯಾರ್ಥಿಗಳು ಮೂರು ವರ್ಷಗಳ ಪದವಿ ಪೂರೈಸಿ, ಬಳಿಕ 2 ವರ್ಷಗಳ ಕಾಲ ಬಿ ಇಡಿ ವ್ಯಾಸಂಗ ಮಾಡಬೇಕಿತ್ತು. ಇದರಿಂದಾಗಿ ಒಟ್ಟು ಐದು ವರ್ಷಗಳ ಕಾಲ ತಗಲುತ್ತಿದ್ದು, ಹೊಸ ನಿಯಮ ಜಾರಿಗೆ ಬಂದರೆ ವಿದ್ಯಾರ್ಥಿಗಳಿಗೆ ಒಂದು ವರ್ಷ ಉಳಿಕೆಯಾಗಲಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...