alex Certify
ಕನ್ನಡ ದುನಿಯಾ       Mobile App
       

Kannada Duniya

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಣಕ್ಕಿಳಿಯಲಿದ್ದಾರೆ ಕನ್ಹಯ್ಯಾ

ಮುಂದಿನ ವರ್ಷ ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಇಂಗಿತವನ್ನು ದೆಹಲಿ ಜವಾಹರ್ ಲಾಲ್ ನೆಹರೂ ವಿಶ್ವವಿದ್ಯಾನಿಲಯದ ಮಾಜಿ ಅಧ್ಯಕ್ಷ ಕನ್ಹಯ್ಯಾ ಕುಮಾರ್ ಹಾಗೂ ಮಾಜಿ ಉಪಾಧ್ಯಕ್ಷೆ ಶೆಹಲಾ ರಶೀದ್ ವ್ಯಕ್ತಪಡಿಸಿದ್ದಾರೆ.

ಸಂದರ್ಶನವೊಂದರಲ್ಲಿ ಪಾಲ್ಗೊಂಡಿದ್ದ ಕನ್ಹಯ್ಯಾ ಕುಮಾರ್, ಕೋಮುವಾದಿ ಬಿಜೆಪಿಯನ್ನು ಮಣಿಸಲು ಬಿಹಾರದಲ್ಲಿ ರಾಷ್ಟ್ರೀಯ ಜನತಾ ದಳ, ಕಾಂಗ್ರೆಸ್ ಹಾಗೂ ಎಡ ಪಕ್ಷಗಳು ಕೈಜೋಡಿಸಿ ತಮ್ಮನ್ನು ಲೋಕಸಭಾ ಅಭ್ಯರ್ಥಿಯನ್ನಾಗಿಸಿದರೆ  ಸ್ಪರ್ಧಿಸಲು ಸಿದ್ದ ಎಂದಿದ್ದಾರೆ.

ತಮ್ಮ ತವರು ಬೇಗುಸರಾಯ್ ನಿಂದಲೇ ಸ್ಪರ್ಧಿಸುವ ಬಯಕೆ ಹೊಂದಿರುವುದಾಗಿ ಹೇಳಿರುವ ಕನ್ಹಯ್ಯಾ ಕುಮಾರ್, ಈ ಜಿಲ್ಲೆಯಲ್ಲಿ ಹಿಂದಿನಿಂದಲೂ ಸಿಪಿಐ ಬಲಿಷ್ಟವಾಗಿದ್ದು, ಕುಟುಂಬ ಸದಸ್ಯರೂ ಸಿಪಿಐ ಬೆಂಬಲಿಗರಾಗಿದ್ದಾರೆ. ತಮ್ಮ ಗ್ರಾಮವನ್ನು ಮಿನಿ ಮಾಸ್ಕೋ ಎಂದೇ ಕರೆಯಲಾಗುತ್ತಿದ್ದು, ಇಲ್ಲಿ ಸಿಪಿಐ ಶಾಸಕರೇ ಆಯ್ಕೆಯಾಗುತ್ತಾ ಬಂದಿದ್ದರು. ಅದರೆ ಕಳೆದ ಎರಡು ಅವಧಿಯಿಂದ ಬಿಜೆಪಿ ಶಾಸಕರು ಆಯ್ಕೆಯಾಗಿದ್ದಾರೆ. 2014 ರ ಲೋಕಸಭಾ ಚುನಾವಣೆಯಲ್ಲಿ ಬೇಗುಸರಾಯ್ ಕ್ಷೇತ್ರ ಬಿಜೆಪಿ ಪಾಲಾಗಿದೆ ಎಂದಿದ್ದಾರೆ.

ಮತ್ತೋರ್ವ ವಿದ್ಯಾರ್ಥಿ ನಾಯಕಿ ಶೆಹಲಾ ರಶೀದ್ ಕೂಡಾ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಕುರಿತು ತಮ್ಮ ಸಹಮತ ವ್ಯಕ್ತಪಡಿಸಿದ್ದು, ತಾವು ಮೂಲತಃ ಶ್ರೀನಗರದವರಾಗಿದ್ದರೂ ಉತ್ತರ ಪ್ರದೇಶದಿಂದ ಕಣಕ್ಕಿಳಿಯುವ ಬಯಕೆ ಹೊಂದಿರುವುದಾಗಿ ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಅತಂತ್ರ ವಿಧಾನಸಭೆ ಸೃಷ್ಟಿಯಾದ ಬಳಿಕ ರಾಜ್ಯದಲ್ಲಿ ಆರಂಭವಾಗಿದೆಯಾ ಶಾಸಕರ ಕುದುರೆ ವ್ಯಾಪಾರ?

    View Results

    Loading ... Loading ...