alex Certify
ಕನ್ನಡ ದುನಿಯಾ       Mobile App
       

Kannada Duniya

ವಿದ್ಯಾರ್ಥಿನಿಗೆ ಪೋಲಿ ಪ್ರಾಧ್ಯಾಪಕ ಮಾಡಿದ್ದೇನು..?

rapee 123

ಹೆಣ್ಣುಮಕ್ಕಳಿಗೆ ರಕ್ಷಣೆಯೇ ಇಲ್ಲದಂತಹ ಪರಿಸ್ಥಿತಿ ಎದುರಾಗಿದೆ. ಸಾಮಾನ್ಯವಾಗಿ ಹೆಚ್ಚಿನ ಪ್ರಕರಣಗಳಲ್ಲಿ ಹೆಣ್ಣುಮಕ್ಕಳ ಮೇಲೆ ಪರಿಚಯಸ್ಥರು, ಮನೆಯವರಿಂದಲೇ ದೌರ್ಜನ್ಯ ನಡೆಯುತ್ತದೆ ಎಂದು ಹೇಳಲಾಗಿದೆ. ಇತ್ತೀಚೆಗೆ ಕಾಲೇಜ್ ಹೋಗಿ ಬರಲು ಕೂಡ ಹಿಂದೆ ಮುಂದೆ ನೋಡುವ ಪರಿಸ್ಥಿತಿ ಎದುರಾಗಿದೆ.

ಕಾಲೇಜ್ ನಲ್ಲಿ ವಿದ್ಯಾರ್ಥಿನಿಯರಿಗೆ ಪೋಲಿ ಹುಡುಗರ ಕಾಟ ಒಂದು ಕಡೆಯಾದರೆ, ಕೆಲವೊಮ್ಮೆ ಪೋಲಿ ಪ್ರಾಧ್ಯಾಪಕರ ಕಾಟವನ್ನೂ ಸಹಿಸಿಕೊಳ್ಳಬೇಕಾಗುತ್ತದೆ. ಹೀಗೆ ಕಾಲೇಜೊಂದರ ಪ್ರಾಧ್ಯಾಪಕನೊಬ್ಬ ಪಾಠ ಮಾಡುವುದನ್ನು ಬಿಟ್ಟು ವಿದ್ಯಾರ್ಥಿನಿ ಮೇಲೆಯೇ ಕಣ್ಣುಹಾಕಿದ ಘಟನೆ ಹೈದರಾಬಾದ್ ಜವಾಹರಲಾಲ್ ನೆಹರು ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ ನಡೆದಿದೆ. ಈ ಕಾಲೇಜ್ ನಲ್ಲಿ ಅತಿಥಿ ಪ್ರಾಧ್ಯಾಪಕನಾಗಿ ಕೆಲಸ ಮಾಡುತ್ತಿದ್ದ ಸುಶೀಲ್ ಕುಮಾರ್ ಎಂಬಾತನೇ ಈ ರೀತಿ ಮಾಡಿದ ಆರೋಪಿ.

ಕಾಲೇಜ್ ನಲ್ಲಿ ಎಂಬಿಎ ವಿದ್ಯಾರ್ಥಿನಿಯ ಜೊತೆಗೆ ಸಲುಗೆಯಿಂದ ಇದ್ದ ಸುಶೀಲ್ ಕುಮಾರ್ ನಂತರ ತನ್ನನ್ನು ಮದುವೆಯಾಗುವಂತೆ ಪೀಡಿಸಿದ್ದಾನೆ. ಆಕೆ ನಿರಾಕರಿಸಿದಾಗ ಮನೆಗೇ ಹೋಗಿ ಧಮಕಿ ಹಾಕಿದ್ದಲ್ಲದೇ, ಮದುವೆಯಾಗದಿದ್ದರೆ ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲ ಚಿತ್ರ ಅಪ್ ಲೋಡ್ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ. ಪೊಲೀಸರು ಆತನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದು, ಮುಂದಿನ ಕ್ರಮ ಜರುಗಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...