alex Certify
ಕನ್ನಡ ದುನಿಯಾ       Mobile App
       

Kannada Duniya

ವಿದ್ಯಾರ್ಥಿಗಳ ಕಣ್ಣೀರಿಗೆ ಕರಗಿದ ಶಿಕ್ಷಣ ಇಲಾಖೆ: ಶಿಕ್ಷಕನ ವರ್ಗಾವಣೆಗೆ ತಾತ್ಕಾಲಿಕ ತಡೆ

ತಮಿಳುನಾಡಿನ ತಿರುವಲ್ಲೂರ್ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ನಡೆದಿದ್ದ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತಲ್ಲದೆ ಗುರು-ಶಿಷ್ಯರ ಬಾಂಧವ್ಯವನ್ನು ಎತ್ತಿ ತೋರಿಸಿತ್ತು.

ವೇಲಿಯಗರಂ ಸರ್ಕಾರಿ ಪ್ರೌಢಶಾಲೆಯಲ್ಲಿ ಶಿಕ್ಷಕರಾಗಿ ಕಾರ್ಯ ನಿರ್ವಹಿಸುತ್ತಿದ್ದ ಭಗವಾನ್ ಎಂಬವರು ಮತ್ತೊಂದು ಶಾಲೆಗೆ ವರ್ಗಾವಣೆಗೊಂಡ ವೇಳೆ ಅಲ್ಲಿನ ವಿದ್ಯಾರ್ಥಿಗಳು ತಮ್ಮ ನೆಚ್ಚಿನ ಶಿಕ್ಷಕರನ್ನು ಕಳುಹಿಸಿಕೊಡುವ ಮನಸ್ಸಿಲ್ಲದೆ ಕಣ್ಣೀರಿಟ್ಟಿದ್ದರು. ಅಷ್ಟೇ ಅಲ್ಲ, ಭಗವಾನ್ ರ ಕಾಲಿಗೆ ಬಿದ್ದು ಇಲ್ಲಿಯೇ ಮುಂದುವರಿಯುವಂತೆ ಬೇಡಿಕೊಂಡಿದ್ದರು. ವಿದ್ಯಾರ್ಥಿಗಳ ಪ್ರೀತಿಯನ್ನು ಕಂಡು ಶಿಕ್ಷಕ ಭಗವಾನ್ ರ ಕಣ್ಣಾಲಿಗಳು ತುಂಬಿ ಬಂದಿದ್ದವು.

ಈ ಭಾವನಾತ್ಮಕ ಸನ್ನಿವೇಶವನ್ನು ಮೊಬೈಲ್ ನಲ್ಲಿ ರೆಕಾರ್ಡ್ ಮಾಡಿಕೊಂಡಿದ್ದವರೊಬ್ಬರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದು, ವೈರಲ್ ಆಗಿತ್ತು. ಇದೀಗ ಶಿಕ್ಷಣ ಇಲಾಖೆ ವಿದ್ಯಾರ್ಥಿಗಳ ಭಾವನೆಗೆ ಸ್ಪಂದಿಸಿ ಭಗವಾನ್ ರ ವರ್ಗಾವಣೆಗೆ ತಾತ್ಕಾಲಿಕ ತಡೆ ನೀಡಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...