alex Certify
ಕನ್ನಡ ದುನಿಯಾ       Mobile App
       

Kannada Duniya

ವಿದ್ಯಾರ್ಥಿನಿಯರನ್ನು ಅಟ್ಟಾಡಿಸಿಕೊಂಡು ಥಳಿಸಿದ ಪೊಲೀಸರು

police, student

ನವದೆಹಲಿ: ಪ್ರತಿಭಟನಾನಿರತ ವಿದ್ಯಾರ್ಥಿಗಳಿಗೆ ರಕ್ಷಣೆ ಕೊಡಬೇಕಾದ ಪೊಲೀಸರೇ, ಅವರೊಂದಿಗೆ ಅಮಾನವೀಯವಾಗಿ ವರ್ತಿಸಿದ ಘಟನೆ ನವದೆಹಲಿಯಲ್ಲಿ ನಡೆದಿದೆ. ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಯುವತಿಯರನ್ನೂ ಕೂಡ ಮುಖ ಮೂತಿ ನೋಡದೇ ಪೊಲೀಸರು ಹಿಗ್ಗಾಮುಗ್ಗಾ ಥಳಿಸಿದ್ದಾರೆ.

ಹೈದರಾಬಾದ್ ಕೇಂದ್ರೀಯ ವಿಶ್ವವಿದ್ಯಾಲಯದ ಸಂಶೋಧನಾ ವಿದ್ಯಾರ್ಥಿ ರೋಹಿತ್ ವೇಮುಲ ಸಾವಿನ ಘಟನೆಯನ್ನು ವಿರೋಧಿಸಿ ನವದೆಹಲಿಯಲ್ಲಿ ವಿದ್ಯಾರ್ಥಿಗಳು, ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದ್ದರು. ದೆಹಲಿಯ ಆರ್.ಎಸ್.ಎಸ್. ಕಚೇರಿಯ ಕಡೆಗೆ ಹೊರಟಿದ್ದ ಪ್ರತಿಭಟನಾನಿರತ ವಿದ್ಯಾರ್ಥಿಗಳನ್ನು ದಾರಿ ಮಧ್ಯದಲ್ಲೇ ತಡೆದ ದೆಹಲಿ ಪೊಲೀಸರು ಮನಸೋ ಇಚ್ಛೆ ಥಳಿಸಿದ್ದಾರೆ. ವಿದ್ಯಾರ್ಥಿನಿಯರೆಂದು ನೋಡದೇ ಕೂದಲು ಹಿಡಿದೆಳೆದು. ಕೆಳಕ್ಕೆ ಬೀಳಿಸಿ ಕಾಲಿನಿಂದ ತುಳಿದಿದ್ದಾರೆ.

ಯುವಕರು, ಯುವತಿಯರನ್ನು ಅಟ್ಟಾಡಿಸಿಕೊಂಡು ಹೋಗಿ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಹೀಗೆ ಪೊಲೀಸರ ಕ್ರೌರ್ಯದ ವರ್ತನೆಯನ್ನು ವಿದ್ಯಾರ್ಥಿಯೊಬ್ಬ ತನ್ನ ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದು, ಸಾಮಾಜಿಕ ಜಾಲತಾಣದಲ್ಲಿ ಅಪ್ ಲೋಡ್ ಮಾಡಿದ್ದಾನೆ. ಈ ಘಟನೆಯ ಬಗ್ಗೆ ಆಮ್ ಆದ್ಮಿ ಪಾರ್ಟಿ ಮುಖಂಡ, ದೆಹಲಿ ಡಿಸಿಎಂ ಮನೀಶ್ ಸಿಸೋಡಿಯಾ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...