alex Certify
ಕನ್ನಡ ದುನಿಯಾ       Mobile App
       

Kannada Duniya

ಆಧಾರ್-ಮೊಬೈಲ್ ಲಿಂಕ್: ಸುಬ್ರಹ್ಮಣ್ಯನ್ ಸ್ವಾಮಿ ವಿರೋಧ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಂತ್ರ ಭಾರತೀಯ ಜನತಾ ಪಕ್ಷದ ನಾಯಕ ಸುಬ್ರಹ್ಮಣ್ಯನ್ ಸ್ವಾಮಿ ಆಧಾರ್ ಜೊತೆ ಮೊಬೈಲ್ ನಂಬರ್ ಲಿಂಕ್ ಮಾಡುವುದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಇದ್ರ ಅವಶ್ಯಕತೆ ಏನಿದೆ ಎಂಬುದನ್ನು ತಿಳಿದುಕೊಳ್ಳಲು ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಪತ್ರ ಬರೆಯುವುದಾಗಿ ಸುಬ್ರಹ್ಮಣ್ಯನ್ ಸ್ವಾಮಿ ಹೇಳಿದ್ದಾರೆ.

ಪ್ರಧಾನಿಗೆ ಶೀಘ್ರದಲ್ಲಿಯೇ ಈ ಬಗ್ಗೆ ಪತ್ರ ಬರೆಯುತ್ತೇನೆಂದು ಸುಬ್ರಹ್ಮಣ್ಯನ್ ಸ್ವಾಮಿ ತಮ್ಮ ಟ್ವೀಟರ್ ನಲ್ಲಿ ಟ್ವಿಟ್ ಮಾಡಿದ್ದಾರೆ. ಆಧಾರ್ ಏಕೆ ನಮ್ಮ ರಾಷ್ಟ್ರೀಯ ಸುರಕ್ಷತೆಗೆ ಬೆದರಿಕೆ ಎಂದು ಪ್ರಶ್ನೆ ಕೇಳಲಿದ್ದೇನೆಂದು ಸುಬ್ರಹ್ಮಣ್ಯನ್ ಸ್ವಾಮಿ ಹೇಳಿದ್ದಾರೆ. ಸುಪ್ರೀಂ ಕೋರ್ಟ್ ಕೂಡ ಈ ಬಗ್ಗೆ ಸೂಕ್ತ ತೀರ್ಪು ನೀಡಲಿದೆ ಎಂಬ ನಂಬಿಕೆ ನನಗಿದೆ ಎಂದು ಅವರು ಹೇಳಿದ್ದಾರೆ.

ಸುಪ್ರೀಂ ಕೋರ್ಟ್, ಐವರು ನ್ಯಾಯಾಧೀಶರ  ಸಂವಿಧಾನ ಪೀಠವೊಂದನ್ನು ರಚಿಸಲಿದೆ. ಅಲ್ಲಿ ಆಧಾರ್ ಕಾರ್ಡ್ ಅನಿವಾರ್ಯತೆ ವಿಚಾರಕ್ಕೆ ಸಂಬಂಧಿಸಿದ ಎಲ್ಲ ಅರ್ಜಿ ವಿಚಾರಣೆ ನಡೆಯಲಿದೆ. ಸೋಮವಾರ ಪಶ್ಚಿಮ ಬಂಗಾಳ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ವಜಾಗೊಳಿಸಿತ್ತು. ಮಮತಾ ಬ್ಯಾನರ್ಜಿ ವೈಯಕ್ತಿಕವಾಗಿ ಅರ್ಜಿ ಸಲ್ಲಿಸಲಿ. ಆದ್ರೆ ಸರ್ಕಾರ ಕಾನೂನಿನ ವಿರುದ್ಧ ಹೋಗುವುದು ಸರಿಯಲ್ಲ ಎಂದಿತ್ತು. ಇದಕ್ಕೆ ಪ್ರತಿಕ್ರಿಯೆ ನೀಡಿದ್ದ ಮಮತಾ ನನ್ನ ನಂಬರ್ ರದ್ದಾದ್ರೂ ಚಿಂತೆಯಿಲ್ಲ. ನಾನು ಆಧಾರ್ ಜೊತೆ ಮೊಬೈಲ್ ನಂಬರ್ ಲಿಂಕ್ ಮಾಡುವುದಿಲ್ಲ ಎಂದಿದ್ದರು.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...