alex Certify
ಕನ್ನಡ ದುನಿಯಾ       Mobile App
       

Kannada Duniya

ದೇವರಿಗೇ ಜಾರಿಯಾಯ್ತು ಸಮನ್ಸ್

lord-hanuman_650x400_81455716710

ಪಾಟ್ನಾ: ಮಧ್ಯಪ್ರದೇಶದಲ್ಲಿ ಭಗವಾನ್ ಮಹಾವೀರನಿಗೆ ಪ್ಯಾನ್ ಕಾರ್ಡ್ ಕಡ್ಡಾಯವಾಗಿ ಹಾಜರುಪಡಿಸಬೇಕೆಂದು ಬ್ಯಾಂಕ್ ಒಂದು ಸೂಚನೆ ನೀಡಿದ ಘಟನೆ ಹಸಿರಾಗಿರುವಾಗಲೇ ಬಿಹಾರದಲ್ಲಿ ದೇವರಿಗೇ ಸಮನ್ಸ್ ಜಾರಿಗೊಳಿಸಿದ ಘಟನೆ ನಡೆದಿದೆ.

ಬಿಹಾರದ ರೋಹ್ಟಸ್ ಜಿಲ್ಲೆಯ ದೆಹ್ರಿ ಆನ್ ಸೋನೆಯಲ್ಲಿರುವ ಶ್ರೀ ಆಂಜನೇಯಸ್ವಾಮಿ ದೇವಾಲಯದ ವಿಚಾರಕ್ಕೆ ಸಂಬಂಧಿಸಿದಂತೆ ರೋಹ್ಟಸ್ ಉಪವಿಭಾಗದ ನ್ಯಾಯಾಲಯ ದೇವರಿಗೇ ಸಮನ್ಸ್ ಜಾರಿ ಮಾಡಿದೆ. ಬಿಹಾರದ ಲೋಕೋಪಯೋಗಿ ಇಲಾಖೆಯಿಂದ ರಸ್ತೆ ನಿರ್ಮಾಣ ಮಾಡುತ್ತಿದ್ದು, ರಸ್ತೆಗೆ ಹೊಂದಿಕೊಂಡಂತೆ ಅಕ್ರಮವಾಗಿ ಶ್ರೀ ಆಂಜನೇಯ ಸ್ವಾಮಿ ದೇವಾಲಯ ನಿರ್ಮಾಣ ಮಾಡಲಾಗಿದೆ. ಇದರಿಂದ ರಸ್ತೆ ನಿರ್ಮಾಣ ಕಾಮಗಾರಿಗೆ ಅಡ್ಡಿಯಾಗಿದೆ ಎಂದು ಇಲಾಖೆಯಿಂದ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಲಾಗಿತ್ತು.

ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ, ಆಂಜನೇಯ ಸ್ವಾಮಿಗೆ ಸಮನ್ಸ್ ಜಾರಿ ಮಾಡುವಂತೆ ಆದೇಶ ನೀಡಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಂಘ ಪರಿವಾರದ ಸಂಘಟನೆಗಳ ಮುಖಂಡರು ದೇವರಿಗೆ ನೀಡಿರುವ ಸಮನ್ಸ್ ವಾಪಸ್ ಪಡೆಯಬೇಕೆಂದು ಒತ್ತಾಯಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...