alex Certify
ಕನ್ನಡ ದುನಿಯಾ       Mobile App
       

Kannada Duniya

ಪುಷ್ಕರ್ ಸಾವು ಪ್ರಕರಣ : ಶಶಿ ತರೂರ್ ಗೆ ಸಿಕ್ತು ಜಾಮೀನು

ನಾಲ್ಕು ವರ್ಷಗಳ ಹಿಂದೆ ನಡೆದ ಸುನಂದಾ ಪುಷ್ಕರ್ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಪತಿ ಹಾಗೂ ಕಾಂಗ್ರೆಸ್ ಸಂಸದ ಶಶಿ ತರೂರ್ ಗೆ ಕೋರ್ಟ್ ಷರತ್ತು ಬದ್ಧ ಜಾಮೀನು ನೀಡಿದೆ. ಇಂದು ಶಶಿ ತರೂರ್ ದೆಹಲಿ ಕೋರ್ಟ್ ಮುಂದೆ ಹಾಜರಾಗಿದ್ದರು. ಜಾಮೀನು ಅರ್ಜಿ ವಿಚಾರಣೆ ನಡೆಸಿದ ಕೋರ್ಟ್ ಶಶಿ ತರೂರ್ ಗೆ ನೆಮ್ಮದಿ ಸುದ್ದಿ ನೀಡಿದೆ.

ದೇಶದಾದ್ಯಂತ ಸುದ್ದಿಗೆ ಗ್ರಾಸವಾಗಿದ್ದ ಸುನಂದಾ ಪುಷ್ಕರ್ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ದಳ ಶಶಿ ತರೂರ್ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿತ್ತು. ಹಾಗೆ ಶಶಿ ತರೂರ್ ಗೆ ಸಮನ್ಸ್ ಜಾರಿ ಮಾಡಿತ್ತು. ಈ ಕಾರಣಕ್ಕೆ ತರೂರ್ ಕೋರ್ಟ್ ನಲ್ಲಿ ಜಾಮೀನು ಅರ್ಜಿ ಸಲ್ಲಿಸಿದ್ದರು.

ಒಂದು ಲಕ್ಷ ರೂಪಾಯಿ ಬಾಂಡ್ ಮೇಲೆ ಕೋರ್ಟ್ ತರೂರ್ ಗೆ ಜಾಮೀನು ನೀಡಿದೆ. ಅನುಮತಿ ಇಲ್ಲದೆ ದೇಶಬಿಟ್ಟು ಹೋಗಬಾರದು ಹಾಗೂ ಸಾಕ್ಷ್ಯಾಧಾರ ನಾಶಪಡಿಸಬಾರದು ಎಂದು ಕೋರ್ಟ್ ಸೂಚನೆ ನೀಡಿದೆ. 2014, ಜುಲೈ 17 ರಂದು ಸುನಂದಾ ಪುಷ್ಕರ್ ಐಷಾರಾಮಿ ಹೊಟೇಲ್ ನಲ್ಲಿ ಮೃತಪಟ್ಟಿದ್ದರು. ಸರ್ಕಾರಿ ಬಂಗಲೆ ದುರಸ್ಥಿಯಾಗ್ತಿದ್ದ ಕಾರಣ ದಂಪತಿ ಹೊಟೇಲ್ ನಲ್ಲಿ ತಂಗಿದ್ದರು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...