alex Certify
ಕನ್ನಡ ದುನಿಯಾ       Mobile App
       

Kannada Duniya

ಮಗುವಿಗೆ ಜನ್ಮ ನೀಡಿದ್ದಾಳೆ ಗುಂಡೇಟಿನಿಂದ ಗಾಯಗೊಂಡಿದ್ದ ಮಹಿಳೆ

ಶನಿವಾರದಂದು ಜಮ್ಮು ಕಾಶ್ಮೀರದ ಸಂಜ್ವಾನ್ ನಲ್ಲಿರುವ ಸೇನಾ ಕ್ಯಾಂಪ್ ಮೇಲೆ ಆತ್ಮಾಹುತಿ ದಾಳಿ ನಡೆಸಿದ್ದ ಉಗ್ರರು ಮನಬಂದಂತೆ ಗುಂಡಿನ ದಾಳಿ ನಡೆಸಿದ್ದರು. ಘಟನೆಯಲ್ಲಿ ಇಬ್ಬರು ಭಾರತೀಯ ಯೋಧರು ಹುತಾತ್ಮರಾಗಿದ್ದು, ಮೂವರು ಉಗ್ರರನ್ನು ಹೊಡೆದುರುಳಿಸಲಾಗಿತ್ತು.

ಉಗ್ರರ ದಾಳಿಯಲ್ಲಿ ನಾಗರಿಕರಿಗೂ ಗಾಯಗಳಾಗಿದ್ದು, ಗುಂಡೇಟು ತಿಂದಿದ್ದ ಗರ್ಭಿಣಿ ಮಹಿಳೆಯೊಬ್ಬರು ಸೇನಾಸ್ಪತ್ರೆಯಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. 35 ವಾರಗಳ ಗರ್ಭಿಣಿಯಾಗಿದ್ದ ಈ ಮಹಿಳೆಯ ಬೆನ್ನಿಗೆ ಗುಂಡು ಹೊಕ್ಕಿತ್ತು.

ಕೂಡಲೇ ಅವರನ್ನು ಹೆಲಿಕಾಪ್ಟರ್ ಮೂಲಕ ಮಿಲಿಟರಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಯಶಸ್ವಿ ಶಸ್ತ್ರ ಚಿಕಿತ್ಸೆ ಬಳಿಕ ಮಹಿಳೆ 2.5 ಕೆ.ಜಿ. ತೂಕದ ಹೆಣ್ಣು ಮಗುವಿಗೆ ಜನ್ಮ ನೀಡಿದ್ದು, ತಾಯಿ-ಮಗು ಆರೋಗ್ಯವಾಗಿದ್ದಾರೆಂದು ಆಸ್ಪತ್ರೆ  ಮೂಲಗಳು ತಿಳಿಸಿವೆ. ಇದು ನಿಜಕ್ಕೂ ಪವಾಡವೆಂದಿರುವ ಸಾಮಾಜಿಕ ಜಾಲತಾಣ ಟ್ವಿಟ್ಟರ್ ಬಳಕೆದಾರರೋರ್ವರು ಮಗುವಿನ ಫೋಟೊವನ್ನು ಶೇರ್ ಮಾಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...