alex Certify
ಕನ್ನಡ ದುನಿಯಾ       Mobile App
       

Kannada Duniya

ನಾಳೆಯೇ ವಿಶ್ವಾಸ ಮತ ಯಾಚನೆಗೆ ಅವಕಾಶ…?

ಸುಪ್ರೀಂ ಕೋರ್ಟ್ ನಲ್ಲಿ ಕರ್ನಾಟಕ ಸರ್ಕಾರ ರಚನೆ ವಿಚಾರ ವಿಚಾರಣೆಗೆ ಬಂದಿದೆ. ಕಾಂಗ್ರೆಸ್-ಜೆಡಿಎಸ್ ಸಲ್ಲಿಸಿರುವ ರಿಟ್ ಅರ್ಜಿ ವಿಚಾರಣೆ ಮುಂದುವರೆದಿದೆ. ವಾದ-ಪ್ರತಿವಾದಗಳನ್ನು ಆಲಿಸುತ್ತಿರುವ ನ್ಯಾಯಮೂರ್ತಿ ಎ.ಕೆ. ಸಿಕ್ರಿ, ಅರ್ಜಿದಾರರ ಮುಂದೆ ಎರಡು ಆಯ್ಕೆಗಳನ್ನು ಮುಂದಿಟ್ಟಿದ್ದಾರೆ.

ಮೊದಲ ಆಯ್ಕೆ : ನಾಳೆಯೇ ವಿಧಾನಸಭೆಯಲ್ಲಿ ವಿಶ್ವಾಸ ಮತಯಾಚನೆ ಮಾಡಬೇಕು. ಯಾರಿಗೂ ಕಾಲಾವಕಾಶ ನೀಡುವುದು ಬೇಡ. ನಾಳೆಯೇ ವಿಧಾನಸಭೆಯಲ್ಲಿ ವಿಶ್ವಾಸ ಮತ ಸಾಬೀತುಪಡಿಸಲಿ.

ಎರಡನೇ ಆಯ್ಕೆ : ರಾಜ್ಯಪಾಲರ ತೀರ್ಮಾನದ ಕುರಿತಂತೆ ವಿಸ್ತೃತ ಚರ್ಚೆ ನಡೆಸುವುದು.

ಎರಡು ಆಯ್ಕೆಯಲ್ಲಿ ಯಾವುದು ಬೆಸ್ಟ್ ಎಂಬುದನ್ನು ನೀವು ತೀರ್ಮಾನ ಮಾಡಿ ಎಂದು ಸುಪ್ರೀಂ ಹೇಳಿದೆ. ಸುಪ್ರೀಂ ಹೇಳಿಕೆ ನಂತ್ರ ಕಾಂಗ್ರೆಸ್-ಬಿಜೆಪಿ ವಾದ ಮುಂದುವರೆದಿದೆ. ಪರ-ವಿರೋಧಿಗಳು ಯಾವ ಆಯ್ಕೆಯನ್ನು ಆಯ್ದುಕೊಳ್ಳುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...