alex Certify
ಕನ್ನಡ ದುನಿಯಾ       Mobile App
       

Kannada Duniya

ಇದೇ ಮೊದಲ ಬಾರಿ ಸುಪ್ರೀಂ ಜಡ್ಜ್ ಗಳಿಂದ ಸುದ್ದಿಗೋಷ್ಠಿ

ದೇಶದ ನ್ಯಾಯಾಂಗ ವ್ಯವಸ್ಥೆಯ ಇತಿಹಾಸದಲ್ಲೇ ಇದೇ ಮೊದಲ ಬಾರಿ ಅಸಮಾನ್ಯ ಸ್ಥಿತಿ ನೋಡಲು ಸಿಕ್ಕಿದೆ. ಸುಪ್ರೀಂ ಕೋರ್ಟ್ ನ ನ್ಯಾಯಾಧೀಶರು ಇದೇ ಮೊದಲ ಬಾರಿ ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದ್ದಾರೆ. ಮುಖ್ಯ ನ್ಯಾಯಾಧೀಶರ ಬಳಿಕ ಎರಡನೇ ಹಿರಿಯ ನ್ಯಾಯಾಧೀಶರಾದ ಚೆಲಮೇಶ್ವರ್ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ್ದಾರೆ.

ನ್ಯಾಯಾಂಗ ವ್ಯವಸ್ಥೆ ಬಗ್ಗೆ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ರಂಜನ್ ಗೊಗೋಯಿ, ಮದನ್ ಲೋಕೂರ್, ಕುರಿಯನ್ ಜೋಸೆಫ್ ಉಪಸ್ಥಿತರಿದ್ದರು. ಸುಪ್ರೀಂ ಕೋರ್ಟ್ ಆಡಳಿತ ಸರಿಯಾಗಿ ಕೆಲಸ ಮಾಡ್ತಿಲ್ಲ. ಇದೇ ಮುಂದುವರೆದಲ್ಲಿ ಪ್ರಜಾಪ್ರಭುತ್ವ ಪರಿಸ್ಥಿತಿ ಸರಿಯಾಗಿರುವುದಿಲ್ಲವೆಂದು ಚೆಲಮೇಶ್ವರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಮುಖ್ಯ ನ್ಯಾಯಾಧೀಶರ ಜೊತೆ ಮಾತುಕತೆ ನಡೆಸಿದ್ದೇವೆ. ಆದ್ರೆ ಅವ್ರು ನಮ್ಮ ಮಾತನ್ನು ಪರಿಗಣಿಸಲಿಲ್ಲ ಎಂದು ಚೆಲಮೇಶ್ವರ್ ಹೇಳಿದ್ದಾರೆ. ನಾಲ್ಕು ತಿಂಗಳ ಹಿಂದೆಯೇ ಸುಪ್ರೀಂ ಕೋರ್ಟ್ ನಲ್ಲಿ ನಡೆಯುತ್ತಿರುವ ಅಕ್ರಮಗಳ ಬಗ್ಗೆ ಪತ್ರ ಬರೆದು ಮುಖ್ಯ ನ್ಯಾಯಾಧೀಶರಿಗೆ ತಿಳಿಸಿದ್ದೇವೆ. ಅವರು ಶೀಘ್ರ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳಬೇಕಿದೆ ಎಂದು ಚೆಲಮೇಶ್ವರ್ ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಗುಜರಾತ್ ಫಲಿತಾಂಶ ಕರ್ನಾಟಕ ವಿಧಾನಸಭಾ ಚುನಾವಣೆ ಮೇಲೆ ಪರಿಣಾಮ ಬೀರಲಿದೆಯೇ...?

    View Results

    Loading ... Loading ...