alex Certify
ಕನ್ನಡ ದುನಿಯಾ       Mobile App
       

Kannada Duniya

ತ್ರಿವಳಿ ತಲಾಕ್ ವಿಚಾರಣೆ ಮುಗಿಸಿ ತೀರ್ಪು ಕಾಯ್ದಿರಿಸಿದ ಸುಪ್ರೀಂ

sc_qkyto3b

ತ್ರಿವಳಿ ತಲಾಕ್ ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ತನ್ನ ತೀರ್ಪನ್ನು ಕಾಯ್ದಿರಿಸಿದೆ. ವಿಚಾರಣೆಯನ್ನು ಸುಪ್ರೀಂ ಪೂರ್ಣಗೊಳಿಸಿದೆ. 6 ದಿನಗಳ ಕಾಲ ನಡೆದ ವಿಚಾರಣೆಯಲ್ಲಿ ಸುಪ್ರೀಂ ಕೋರ್ಟ್ ಎರಡು ಕಡೆಯ ವಾದ- ವಿವಾದಗಳನ್ನು ಆಲಿಸಿದೆ.

ದೇಶದಾದ್ಯಂತ ಸಾಕಷ್ಟು ಚರ್ಚೆಗೆ ಕಾರಣವಾಗಿದ್ದ ತ್ರಿವಳಿ ತಲಾಕ್ ವಿಷಯವನ್ನು ಗಂಭೀರವಾಗಿ ಪರಿಗಣಿಸಿದ್ದ ಸುಪ್ರೀಂ ಕೋರ್ಟ್ ಬೇಸಿಗೆ ರಜಾ ಅವಧಿಯಲ್ಲಿ ವಿಚಾರಣೆ ನಡೆಸಿದೆ. ಕಳೆದ 6 ದಿನಗಳಿಂದ ಕೇಂದ್ರ ಸರ್ಕಾರ ಹಾಗೂ ಆಲ್ ಇಂಡಿಯಾ ಮುಸ್ಲಿಂ ಪರ್ಸನಲ್ ಲಾ ಬೋರ್ಡ್ ಪರ ವಕೀಲರ ವಾದ-ವಿವಾದಗಳನ್ನು ಆಲಿಸಿದೆ. ಮುಖ್ಯ ನ್ಯಾಯಮೂರ್ತಿ ಜೆ.ಎಸ್. ಖೇಹರ್ ಅವರನ್ನೊಳಗೊಂಡ ಐದು ಜನ ನ್ಯಾಯಧೀಶರ ತಂಡ ವಿಚಾರಣೆ ನಡೆಸಿತ್ತು.

ಗುರುವಾರ ವಿಚಾರಣೆ ಪೂರ್ಣಗೊಳಿಸಿದ ಕೋರ್ಟ್ ತೀರ್ಪನ್ನು ಕಾಯ್ದಿರಿಸಿದೆ. ಬುಧವಾರ ಮುಸ್ಲಿಂ ಮಹಿಳೆಯರಿಗೆ ತ್ರಿವಳಿ ತಲಾಕ್ ತಿರಸ್ಕರಿಸುವ ಅಧಿಕಾರವಿದೆಯೇ ಎಂದು ಸುಪ್ರೀಂ ಕೋರ್ಟ್ ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿಗೆ ಕೇಳಿತ್ತು. ಇದಕ್ಕೆ ಮಂಡಳಿ ಉತ್ತರ ನೀಡಿತ್ತು. ಹಾಗೆ ಮಂಗಳವಾರ ಶ್ರೀರಾಮ ಅಯೋಧ್ಯೆಯಲ್ಲಿ ಹುಟ್ಟಿದ್ದು ಎಷ್ಟು ಸತ್ಯವೋ ನಮ್ಮ ಕಾನೂನು ಕೂಡ ಅಷ್ಟೇ ಸತ್ಯ ಎಂದು ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ಹೇಳಿತ್ತು.

Subscribe Newsletter

Get latest updates on your inbox...

Opinion Poll

  • ಕಪ್ಪು ಹಣಕ್ಕೆ ಕಡಿವಾಣ ಹಾಕುವ ಕೇಂದ್ರ ಸರ್ಕಾರದ ಪ್ರಯತ್ನ ವಿಫಲವಾಗಿದೆಯೇ..?

    View Results

    Loading ... Loading ...