alex Certify
ಕನ್ನಡ ದುನಿಯಾ       Mobile App
       

Kannada Duniya

ಕೇರಳ ಲವ್ ಜಿಹಾದ್: ಸುಪ್ರೀಂ ಕೋರ್ಟ್ ನಿಂದ ಮಹತ್ವದ ತೀರ್ಪು

ಕೇರಳ ಲವ್ ಜಿಹಾದ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ತನ್ನ ತೀರ್ಪನ್ನು ಪ್ರಕಟಿಸಿದೆ. ಸುಪ್ರೀಂ ಕೋರ್ಟ್ ಹಾದಿಯಾಗೆ ನ್ಯಾಯ ಮತ್ತು ಸ್ವಾತಂತ್ರ್ಯ ನೀಡಿದೆ. ಹೈಕೋರ್ಟ್ ಆದೇಶಕ್ಕೆ ತಡೆ ನೀಡಿರುವ ಸುಪ್ರೀಂ ಕೋರ್ಟ್ ಹಾದಿಯಾ ಹಾಗೂ ಶಫೀನ್ ಪತಿ-ಪತ್ನಿಯಂತೆ ಬದುಕಬಹುದೆಂದು ತೀರ್ಪು ನೀಡಿದೆ.

ಈ ಹಿಂದೆ ಪ್ರಕರಣದ ವಿಚಾರಣೆ ನಡೆಸಿದ್ದ ಕೇರಳ ಹೈಕೋರ್ಟ್ ಹಾದಿಯಾ-ಶಫೀನ್ ಮದುವೆಯನ್ನು ರದ್ದುಗೊಳಿಸಿತ್ತು. ಇದನ್ನು ಪ್ರಶ್ನಿಸಿ ಹದಿಯಾ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಳು. ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ ಐ ಎ ತನಿಖೆ ಮುಂದುವರಿಸಬಹುದೆಂದು ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ.

ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ದೀಪಕ್ ಮಿಶ್ರಾ ಪೀಠ, ಹೈಕೋರ್ಟ್ ಮದುವೆ ರದ್ದು ಮಾಡುವಂತಿಲ್ಲ. ಹಾದಿಯಾಗೆ ತನ್ನ ಕನಸನ್ನು ಪೂರ್ಣಗೊಳಿಸುವ ಸಂಪೂರ್ಣ ಹಕ್ಕಿದೆ ಎಂದಿದೆ. ಎನ್ ಐ ಎ ತನಿಖೆ ಬಹುತೇಕ ಪೂರ್ಣಗೊಳಿಸಿದ್ದು ಇನ್ನಿಬ್ಬರ ವಿಚಾರಣೆ ಮಾತ್ರ ಬಾಕಿಯಿದೆಯಂತೆ. ತನಿಖೆಗೆ ಮಧ್ಯಪ್ರವೇಶ ಮಾಡುವುದಿಲ್ಲವೆಂದು ಸುಪ್ರೀಂ ಕೋರ್ಟ್ ಹೇಳಿದೆ. ಈವರೆಗೆ ನಡೆದ ತನಿಖಾ ವರದಿಯನ್ನು ಎನ್ ಐ ಎ ಸುಪ್ರೀಂ ಕೋರ್ಟ್ ಮುಂದಿಟ್ಟಿದೆ.

 

 

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...