alex Certify
ಕನ್ನಡ ದುನಿಯಾ       Mobile App
       

Kannada Duniya

ಬದಲಾಯ್ತು ಮದ್ಯದಂಗಡಿ ಸ್ಥಳಾಂತರ ಆದೇಶ

sc

ನವದೆಹಲಿ: ಮದ್ಯ ಸೇವನೆ ಮಾಡಿ ವಾಹನ ಚಾಲನೆ ಮಾಡುವುದರಿಂದ ಅಪಘಾತಗಳು ಹಾಗೂ ಸಾವಿನ ಸಂಖ್ಯೆ ಹೆಚ್ಚಾದ ಹಿನ್ನಲೆಯಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿತ್ತು.

ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳಲ್ಲಿರುವ ಮದ್ಯದ ಅಂಗಡಿಗಳನ್ನು 500 ಮೀಟರ್ ದೂರಕ್ಕೆ ಸ್ಥಳಾಂತರ ಮಾಡುವಂತೆ ಆದೇಶ ನೀಡಿತ್ತು.

ಈ ಆದೇಶದ ಕುರಿತಾಗಿ ಹಲವು ರಾಜ್ಯ ಸರ್ಕಾರಗಳು ಮೇಲ್ಮನವಿ ಸಲ್ಲಿಸಿ ಪುನರ್ ಪರಿಶೀಲನೆ ನಡೆಸಬೇಕೆಂದು ಮನವಿ ಮಾಡಿದ್ದವು. ಮೊದಲಿಗೆ ಆದೇಶ ಮಾರ್ಪಾಡು ಮಾಡಲು ಸಾಧ್ಯವಿಲ್ಲ ಎಂದು ಕೋರ್ಟ್ ತಿಳಿಸಿತ್ತು.

ಸುದೀರ್ಘ ವಿಚಾರಣೆ ಬಳಿಕ ಆದೇಶವನ್ನು ಮಾರ್ಪಾಡು ಮಾಡಲಾಗಿದೆ. ಮದ್ಯದಂಗಡಿ ಸ್ಥಳಾಂತರ ದೂರವನ್ನು 500 ಮೀಟರ್ ನಿಂದ 220 ಮೀಟರ್ ದೂರಕ್ಕೆ ಇಳಿಸಲಾಗಿದೆ. ಮುಖ್ಯ ನ್ಯಾಯಮೂರ್ತಿ ಜೆ.ಎಸ್. ಖೆಹರ್, ನ್ಯಾಯಮೂರ್ತಿಗಳಾದ ಡಿ.ವೈ. ಚಂದ್ರಚೂಡ್, ಎಲ್. ನಾಗೇಶ್ವರರಾವ್ ಅವರು ಆದೇಶವನ್ನು ಮಾರ್ಪಾಡು ಮಾಡಿದ್ದಾರೆ. 220 ಮೀಟರ್ ವ್ಯಾಪ್ತಿಗೆ ಸ್ಥಳಾಂತರ ಮಾಡಲು ಆದೇಶಿಸಿದ್ದು, ಕೆಲವು ನಿರ್ಬಂಧಗಳನ್ನು ವಿಧಿಸಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...