alex Certify
ಕನ್ನಡ ದುನಿಯಾ       Mobile App
       

Kannada Duniya

ರಾಮಮಂದಿರ ವಿವಾದ : ಸುಪ್ರೀಂ ಕೋರ್ಟ್ ನಿಂದ ಮಹತ್ವದ ಸೂಚನೆ

supreme-cort_gc45elu

ಅಯೋಧ್ಯೆ ರಾಮಮಂದಿರ ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ ನೀಡಿದೆ. ಕೋರ್ಟ್ ಹೊರಗೆ ಸಮಸ್ಯೆ ಬಗೆಹರಿಸಿಕೊಳ್ಳುವಂತೆ ಎರಡೂ ಪಕ್ಷಗಳಿಗೆ ಕೋರ್ಟ್ ತಿಳಿಸಿದೆ.

ಎರಡೂ ಪಕ್ಷಗಳು ಪರಸ್ಪರ ಒಪ್ಪಂದದ ಮೂಲಕ ಸಮಸ್ಯೆ ಬಗೆಹರಿಸಿಕೊಳ್ಳಿ ಎಂದು ಮುಖ್ಯ ನ್ಯಾಯಮೂರ್ತಿ ಜಗದೀಶ್ ಸಿಂಗ್ ಖೇಹರ್ ಸೂಚನೆ ನೀಡಿದ್ದಾರೆ. ಎರಡೂ ಕಡೆಯ ಮುಖಂಡರು ನ್ಯಾಯಾಲಯದಿಂದ ಹೊರಗೆ ಮಾತುಕತೆ ನಡೆಸಿ ಪರಿಹಾರ ಕಂಡುಕೊಳ್ಳಬೇಕು. ವಿಚಾರ-ವಿನಿಮಯ ನಡೆಸಲು ಎರಡೂ ಕಡೆಯವರು ಸಮಾಲೋಚಕರನ್ನು ನೇಮಕ ಮಾಡಿಕೊಳ್ಳಬಹುದೆಂದು ಕೋರ್ಟ್ ಹೇಳಿದೆ.

ರಾಮ ಮಂದಿರ ವಿಚಾರ ಧರ್ಮ ಹಾಗೂ ನಂಬಿಕೆ ಮೇಲೆ ನಿಂತಿದೆ. ಕೋರ್ಟ್ ಹೊರಗೆ ಸಮಸ್ಯೆ ಬಗೆಹರಿಸಿಕೊಳ್ಳಲು ಪ್ರಯತ್ನ ಮಾಡಿ. ಅವಶ್ಯಕತೆ ಇದ್ದಲ್ಲಿ ಸುಪ್ರೀಂ ಕೋರ್ಟ್ ನ್ಯಾಯಾಧೀಶರು ಮಧ್ಯಸ್ಥರಾಗಿ ಕೆಲಸ ಮಾಡಲಿದ್ದಾರೆಂದು ಕೋರ್ಟ್ ರಾಮಮಂದಿರ ನಿರ್ಮಾಣ ವಿಚಾರಕ್ಕೆ ಸಂಬಂಧಿಸಿದಂತೆ ಕೋರ್ಟ್ ನಲ್ಲಿ ಹೋರಾಟ ನಡೆಸುತ್ತಿರುವ ಬಿಜೆಪಿ ನಾಯಕ ಸುಬ್ರಹ್ಮಣ್ಯ ಸ್ವಾಮಿಗೆ ಕೋರ್ಟ್ ಸಲಹೆ ನೀಡಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲ ಪಕ್ಷದ ಸದಸ್ಯರು ಮಾತುಕತೆಯಲ್ಲಿ ಪಾಲ್ಗೊಳ್ಳಬಹುದು. ಒಂದು ವೇಳೆ ಪ್ರಕರಣ ಬಗೆಹರಿಯದಿದ್ದಲ್ಲಿ ಸುಪ್ರೀಂ ಕೋರ್ಟ್ ಮಧ್ಯವರ್ತಿಗಳನ್ನು ನೇಮಿಸಲಿದೆ ಎಂದು ಮುಖ್ಯ ನ್ಯಾಯಮೂರ್ತಿಗಳು ತಿಳಿಸಿದ್ದಾರೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...