alex Certify
ಕನ್ನಡ ದುನಿಯಾ       Mobile App
       

Kannada Duniya

‘ಆಧಾರ್’ ಕುರಿತು ಇಂದು ಹೊರ ಬೀಳಲಿದೆ ಮಹತ್ವದ ತೀರ್ಪು

ಸರ್ಕಾರ ಹಾಗೂ ಖಾಸಗಿಯವರ ಹಲವು ಸೇವೆಗಳನ್ನು ಪಡೆಯಲು ‘ಆಧಾರ್’ ಕಡ್ಡಾಯ ಮಾಡಿರುವುದನ್ನು ಪ್ರಶ್ನಿಸಿ ಹಾಗೂ ಇದರಿಂದ ವ್ಯಕ್ತಿಯ ಖಾಸಗಿತನಕ್ಕೆ ಧಕ್ಕೆ ಬರುತ್ತದೆಂದು ಆಕ್ಷೇಪಿಸಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆ ನಡೆಸಿರುವ ಸುಪ್ರೀಂ ಕೋರ್ಟ್, ಇಂದು ಈ ಕುರಿತು ತನ್ನ ಮಹತ್ವದ ತೀರ್ಪು ಪ್ರಕಟಿಸಲಿದೆ.

ಆಧಾರ್ ಸಿಂಧುತ್ವ ಪ್ರಶ್ನಿಸಿ ಸಲ್ಲಿಕೆಯಾಗಿರುವ 27 ಅರ್ಜಿಗಳ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ಐವರು ನ್ಯಾಯಮೂರ್ತಿಗಳ ಸಂವಿಧಾನ ಪೀಠ ಪೂರ್ಣಗೊಳಿಸಿದ್ದು, ಈ ಕುರಿತ ತೀರ್ಪನ್ನು ಇಂದು ಪ್ರಕಟಿಸುವುದಾಗಿ ಹೇಳಿತ್ತು.

ಆಧಾರ್ ಯೋಜನೆಯಡಿ ನಾಗರೀಕರ ಬೆರಳಚ್ಚು, ಕಣ್ಣಿನ ಸ್ಕ್ಯಾನ್ ಸೇರಿದಂತೆ ಕೆಲ ಖಾಸಗಿ ಮಾಹಿತಿ ಸಂಗ್ರಹಿಸುತ್ತಿರುವುದನ್ನು ಆಕ್ಷೇಪಿಸಿದ್ದ ಅರ್ಜಿದಾರರು, ಇದರಿಂದ ಖಾಸಗಿತನಕ್ಕೆ ಧಕ್ಕೆ ಬರುತ್ತದೆಂದು ವಾದಿಸಿದ್ದರು. ಸುಪ್ರೀಂ ಕೋರ್ಟ್ 2017 ರ ತನ್ನ ತೀರ್ಪಿನಲ್ಲಿ ವ್ಯಕ್ತಿಗಳ ಖಾಸಗಿತನ ಅವರ ಮೂಲಭೂತ ಹಕ್ಕೆಂದು ಹೇಳಿರುವುದರಿಂದ ‘ಆಧಾರ್’ ಕುರಿತ ಇಂದಿನ ತೀರ್ಪು ಎಲ್ಲರಲ್ಲೂ ಕುತೂಹಲ ಮೂಡಿಸಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...