alex Certify
ಕನ್ನಡ ದುನಿಯಾ       Mobile App
       

Kannada Duniya

ಸುಪ್ರೀಂನಲ್ಲಿಂದು ಆಧಾರ್ ಸೇರಿ ಲವ್ ಜಿಹಾದ್ ವರೆಗೆ ಮಹತ್ವದ ಅರ್ಜಿಗಳ ವಿಚಾರಣೆ

ಸುಪ್ರೀಂ ಕೋರ್ಟ್ ಸೋಮವಾರ ಹಲವು ಪ್ರಮುಖ ವಿಷ್ಯಗಳ ಬಗ್ಗೆ ತನ್ನ ತೀರ್ಪು ಪ್ರಕಟಿಸುವ ಸಾಧ್ಯತೆಯಿದೆ. ಆಧಾರ್ ಕಾರ್ಡ್, ಕೇರಳದ ಲವ್ ಜಿಹಾದ್, ಆರ್ಟಿಕಲ್ 35 ಎ ಸೇರಿದಂತೆ ಮಹತ್ವದ ಪ್ರಕರಣಗಳು ಇಂದು ಸುಪ್ರೀಂ ಕೋರ್ಟ್ ಮುಂದೆ ಬರಲಿದೆ.

ಸಮಾಜ ಕಲ್ಯಾಣ ಯೋಜನೆಗಳಿಗೆ 12 ಸಂಖ್ಯೆಯ ಆಧಾರ್ ಕಾರ್ಡ್ ಅನಿವಾರ್ಯ ಮಾಡಿರುವುದನ್ನು ವಿರೋಧಿಸಿ ಪಶ್ಚಿಮ ಬಂಗಾಳ ಸರ್ಕಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ನ್ಯಾಯಮೂರ್ತಿ ಎ.ಕೆ. ಸಿಕ್ರಿ ನೇತೃತ್ವದ ಪೀಠ ಈ ಅರ್ಜಿಯ ವಿಚಾರಣೆ ಕೈಗೆತ್ತಿಕೊಳ್ಳಲಿದೆ. ಆಧಾರ್ ಕಾರ್ಡ್ ಲಿಂಕ್ ಮಾಡಲು ಮಾರ್ಚ್ 31ರವರೆಗೆ ಅವಕಾಶ ನೀಡುವುದಾಗಿ ಸುಪ್ರೀಂ ಕೋರ್ಟ್ ಮುಂದೆ ಕೇಂದ್ರ ಸರ್ಕಾರ ಹೇಳುವ ಸಾಧ್ಯತೆಯಿದೆ.

ಇದೇ ವೇಳೆ ಆಧಾರ್ ಜೊತೆ ಮೊಬೈಲ್ ನಂಬರ್ ಲಿಂಕ್ ಮಾಡುವ ವಿಷ್ಯದ ಬಗ್ಗೆಯೂ ವಿಚಾರಣೆ ನಡೆಯಲಿದೆ.

ಸುಪ್ರೀಂ ಕೋರ್ಟ್ ಸೋಮವಾರ ಜಮ್ಮು-ಕಾಶ್ಮೀರಕ್ಕೆ ಸಂಬಂಧಿಸಿದ ಆರ್ಟಿಕಲ್ 35 ಎ ಬಗ್ಗೆಯೂ ವಿಚಾರಣೆ ನಡೆಸಲಿದೆ. ನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ತಂಡ ಈ ವಿಷ್ಯದ ಬಗ್ಗೆ ಮಹತ್ವದ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆಯಿದೆ. ವಿ ದಿ ಸಿಟಿಜನ್ ಹೆಸರಿನ ಸಂಸ್ಥೆಯೊಂದು ಈ ಆರ್ಟಿಕಲ್ ಬಗ್ಗೆ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದೆ.

ಸೋಮವಾರ ಕೇರಳ ಲವ್ ಜಿಹಾದ್ ವಿಚಾರ ಕೂಡ ವಿಚಾರಣೆಗೆ ಬರಲಿದೆ. ಕೇರಳದ ಮುಸ್ಲಿಂ ಯುವಕನೊಬ್ಬ ಕೇರಳ ಹೈಕೋರ್ಟ್ ತೀರ್ಪು ಪ್ರಶ್ನಿಸಿ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದಾನೆ. ಮುಸ್ಲಿಂ ಯುವಕ ಹಿಂದು ಯುವತಿ ಜೊತೆ ಮದುವೆಯಾಗಿದ್ದು, ಇದನ್ನು ಲವ್ ಜಿಹಾದ್ ಎಂದು ತೀರ್ಪು ನೀಡಿ ಕೇರಳ ಹೈಕೋರ್ಟ್ ಮದುವೆಯನ್ನು ರದ್ದುಗೊಳಿಸಿತ್ತು.

ಬಿಸಿಸಿಐನಲ್ಲಿ ಸುಧಾರಣೆ, ಖಾಸಗಿ ಶಾಲೆಗಳಲ್ಲಿ ಬಿಗಿ ಭದ್ರತೆಗೆ ಸಂಬಂಧಿಸಿದಂತೆ ಸಲ್ಲಿಸಿರುವ ಅರ್ಜಿ ವಿಚಾರಣೆ ಕೂಡ ಇಂದು ಸುಪ್ರೀಂ ಕೋರ್ಟ್ ನಲ್ಲಿ ನಡೆಯಲಿದೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...