alex Certify
ಕನ್ನಡ ದುನಿಯಾ       Mobile App
       

Kannada Duniya

ಎಸ್ಸಿ/ಎಸ್ಟಿ ಬಡ್ತಿ ಮೀಸಲಾತಿ ರದ್ದು ಮಾಡಿದ ಸುಪ್ರೀಂ ಕೋರ್ಟ್

ಎಸ್ಸಿ, ಎಸ್ಟಿ ಬಡ್ತಿ ಮೀಸಲಾತಿ ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. 2006 ರ ತೀರ್ಪನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ. ಬಡ್ತಿ ವಿಚಾರದಲ್ಲಿ ಸೇವಾ ಹಿರಿತನವನ್ನು ಪರಿಗಣಿಸಬೇಕು. ಯಾವುದೇ ಕಾರಣಕ್ಕೂ ಎಸ್ಸಿ, ಎಸ್ಟಿ ಬಡ್ತಿಯನ್ನು ಮೀಸಲಾತಿಗೆ ತೆಗೆದುಕೊಳ್ಳಬಾರದು ಎಂದು ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ ನೀಡಿದೆ.

ಸಾಂವಿಧಾನಿಕ ಪೀಠಕ್ಕೆ ಈ ಪ್ರಕರಣವನ್ನು ಹಸ್ತಾಂತರಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಸಂವಿಧಾನ ಪೀಠಕ್ಕೆ ಪ್ರಕರಣ ಹಸ್ತಾಂತರ ಅಗತ್ಯವಿಲ್ಲವೆಂದು ಕೋರ್ಟ್ ಹೇಳಿದೆ. ಈ ಹಿಂದೆ 2006ರಲ್ಲಿ ನೀಡಿದ್ದ ತೀರ್ಪಿನ ಮರುಪರಿಶೀಲನೆ ಇಲ್ಲವೆಂದು ಕೋರ್ಟ್ ಹೇಳಿದೆ. 2006ರ ಎಂ. ನಾಗರಾಜು ಪ್ರಕರಣ ತೀರ್ಪನ್ನು ಮರು ಪರಿಶೀಲನೆ ಮಾಡುವ ಅಗತ್ಯವಿಲ್ಲವೆಂದು ಕೋರ್ಟ್ ಹೇಳಿದೆ.

ಸುಪ್ರೀಂ ಈ ತೀರ್ಪಿನಿಂದ ರಾಜ್ಯ ಸರ್ಕಾರಿ ನೌಕರರಿಗೆ ದೊಡ್ಡ ಹೊಡೆತವಾಗಿದೆ. ರಾಜ್ಯ ಸರ್ಕಾರಿ ನೌಕರರಿಗೆ ಎಸ್ಸಿ/ಎಸ್ಟಿ ಆಧಾರದ ಮೇಲೆ ಬಡ್ತಿ ನೀಡಲಾಗಿತ್ತು. ಸುಪ್ರೀಂ ತೀರ್ಪಿನ ನಂತ್ರ ಹಿಂಬಡ್ತಿಯಾಗುವ ಸಾಧ್ಯತೆಯಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...