alex Certify
ಕನ್ನಡ ದುನಿಯಾ       Mobile App
       

Kannada Duniya

ಮದುವೆ ನಂತ್ರ ಬದಲಾಗಲ್ಲ ಪತ್ನಿ ಜಾತಿ ಧರ್ಮ: ಸುಪ್ರೀಂ ಕೋರ್ಟ್

ಮದುವೆ ನಂತ್ರ ಪತ್ನಿ ಧರ್ಮ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಗುರುವಾರ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಮದುವೆ ನಂತ್ರ ಪತಿ ಪ್ರಕಾರ ಪತ್ನಿ ಧರ್ಮ ಬದಲಾಗಬೇಕೆಂಬ ಕಾನೂನಿಲ್ಲವೆಂದು ಸುಪ್ರೀಂ ಕೋರ್ಟ್ ಹೇಳಿದೆ. ಮಹಿಳೆ ಬೇರೆ ಧರ್ಮದ ವ್ಯಕ್ತಿಯನ್ನು ಮದುವೆಯಾದ ನಂತ್ರ ಆಕೆ ಗಂಡನ ಧರ್ಮಕ್ಕೆ ಸೇರಬೇಕೆಂದಿಲ್ಲ ಎಂದು ಸುಪ್ರೀಂ ಕೋರ್ಟ್ ಆದೇಶ ನೀಡಿದೆ.

ಪಾರ್ಸಿ ಮಹಿಳೆಯೊಬ್ಬಳು ಹಿಂದೂ ಧರ್ಮದ ವ್ಯಕ್ತಿಯನ್ನು ಮದುವೆಯಾದ ಪ್ರಕರಣದ ವಿಚಾರಣೆ ವೇಳೆ ಕೋರ್ಟ್ ಈ ತೀರ್ಪು ನೀಡಿದೆ. ಹೈಕೋರ್ಟ್ ತೀರ್ಪಿನ ವಿರುದ್ಧ ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ. ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ಪೀಠ ಈ ತೀರ್ಪು ನೀಡಿದೆ.

ಪಾರ್ಸಿ ಮಹಿಳೆ ಎಮ್ ಗುಪ್ತಾ ಹಿಂದೂ ಯುವಕನನ್ನು ಮದುವೆಯಾಗಿದ್ದಳು. ಆಕೆ ತನ್ನ ಪಾಲಕರ ಅಂತ್ಯ ಸಂಸ್ಕಾರದಲ್ಲಿ ಪಾಲ್ಗೊಳ್ಳಲು ನಿರ್ಧರಿಸಿದ್ದಳು. ಆದ್ರೆ ಪಾರ್ಸಿ ಬೋರ್ಡ್ ಇದಕ್ಕೆ ಅನುಮತಿ ನೀಡಿರಲಿಲ್ಲ. ಈ ಸಂಬಂಧ ಪಾರ್ಸಿ ಮಹಿಳೆ ಕೋರ್ಟ್ ಮೆಟ್ಟಿಲೇರಿದ್ದಳು. ವಿಚಾರಣೆ ನಡೆಸಿದ್ದ ಗುಜರಾತ್ ಹೈ ಕೋರ್ಟ್ ಮಹಿಳೆ ಮದುವೆಯಾದ ನಂತ್ರ ಪತಿ ಧರ್ಮಕ್ಕೆ ಬದಲಾಗಬೇಕೆಂದು ತೀರ್ಪು ನೀಡಿತ್ತು. ಈ ತೀರ್ಪನ್ನು ಪ್ರಶ್ನಿಸಿ ಮಹಿಳೆ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಳು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...