alex Certify
ಕನ್ನಡ ದುನಿಯಾ       Mobile App
       

Kannada Duniya

ಸುಷ್ಮಾ ಸ್ವರಾಜ್ ಗೆ ಕಿಡ್ನಿ ಕಸಿ ಶಸ್ತ್ರಚಿಕಿತ್ಸೆ

sushma-swaraj-lf

ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಗೆ ಯಶಸ್ವಿಯಾಗಿ ಮೂತ್ರಪಿಂಡ ಕಸಿ ಮಾಡಲಾಗಿದೆ. ಕೆಲ ದಿನಗಳಿಂದ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸುಷ್ಮಾ ಸ್ವರಾಜ್ ಗೆ ಶನಿವಾರ ಮೂತ್ರಪಿಂಡ ಕಸಿ ಮಾಡಲಾಗಿದೆ.

ಸುಮಾರು 5 ಗಂಟೆಗಳ ಕಾಲ ಸುಷ್ಮಾ ಸ್ವರಾಜ್ ಗೆ ಶಸ್ತ್ರಚಿಕಿತ್ಸೆ ನಡೆದಿದೆ ಎಂದು ಮೂಲಗಳು ಹೇಳಿವೆ. ಕಿಡ್ನಿ ನೀಡಿದ ವ್ಯಕ್ತಿ ಸುಷ್ಮಾ ಸಂಬಂಧಿಯಲ್ಲ ಎಂಬ ಮಾತುಗಳು ಕೇಳಿ ಬಂದಿವೆ. ಏಮ್ಸ್ ನಿರ್ದೇಶಕ ಎಂಸಿ ಮಿಶ್ರಾ, ವಿ.ಕೆ ಬನ್ಸಾಲ್, ಸಂದೀಪ್ ಅಗ್ರವಾಲ್ ಸೇರಿದಂತೆ ದೇಶದ ಪ್ರಸಿದ್ಧ ಶಸ್ತ್ರಚಿಕಿತ್ಸಕರು ಈ ಶಸ್ತ್ರಚಿಕಿತ್ಸೆಯಲ್ಲಿ ಪಾಲ್ಗೊಂಡಿದ್ದರು. ಬೆಳಿಗ್ಗೆ 9 ಗಂಟೆಯಿಂದ ಮಧ್ಯಾಹ್ನ 11.30ರವರೆಗೆ ಶಸ್ತ್ರಚಿಕಿತ್ಸೆ ನಡೆದಿದೆ.

ಸುಮಾರು 3 ಗಂಟೆ ವೇಳೆಗೆ ಸುಷ್ಮಾ ಸ್ವರಾಜ್ ಅವರನ್ನು ಐಸಿಯುವಿಗೆ ಶಿಫ್ಟ್ ಮಾಡಲಾಗಿದೆ. ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ನಡೆದಿದೆ ಎಂದು ಏಮ್ಸ್ ಮೂಲಗಳು ತಿಳಿಸಿವೆ. ನವೆಂಬರ್ 16ರಂದು ಸುಷ್ಮಾ ಆಸ್ಪತ್ರೆಗೆ ದಾಖಲಾಗಿರುವುದಾಗಿ ಟ್ವೀಟ್ ಮಾಡಿದ್ದರು.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...