alex Certify
ಕನ್ನಡ ದುನಿಯಾ       Mobile App
       

Kannada Duniya

ಕೇಂದ್ರ ಸಚಿವೆ ಸುಷ್ಮಾ ಸ್ವರಾಜ್ ಗೆ ಕಿಡ್ನಿ ವೈಫಲ್ಯ

sushma-swaraj

ನವದೆಹಲಿ: ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ, ವಿದೇಶಾಂಗ ವ್ಯವಹಾರಗಳ ಇಲಾಖೆ ಸಚಿವೆ ಸುಷ್ಮಾ ಸ್ವರಾಜ್ ಅವರನ್ನು, ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಆಸ್ಪತ್ರೆಯಲ್ಲಿ ಡಯಾಲಿಸಿಸ್ ಮಾಡಿಸಿಕೊಂಡಿರುವ ಸುಷ್ಮಾ ಅವರಿಗೆ, ಏಮ್ಸ್ ಆಸ್ಪತ್ರೆಯ ವೈದ್ಯರು ಕಿಡ್ನಿ ಕಸಿ ಮಾಡಲು ಸಿದ್ಧತೆ ನಡೆಸಿದ್ದಾರೆ. ಸುಷ್ಮಾ ಅವರು ತಮ್ಮ ಟ್ವಿಟರ್ ಖಾತೆಯಲ್ಲಿ ಇದನ್ನು ಖಚಿತಪಡಿಸಿದ್ದು, ಕಿಡ್ನಿ ವೈಫಲ್ಯದಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದೇನೆ. ಏಮ್ಸ್ ವೈದ್ಯರು ಚಿಕಿತ್ಸೆ ನೀಡಿದ್ದು, ಶ್ರೀ ಕೃಷ್ಣನ ಅನುಗ್ರಹದಿಂದ ಸರಿಯಾಗಲಿದೆ ಎಂದು ಹೇಳಿದ್ದಾರೆ.

ಕೆಲವು ದಿನಗಳಿಂದ ಸುಷ್ಮಾ ಸ್ವರಾಜ್ ಅವರಿಗೆ ಅನಾರೋಗ್ಯ ಉಂಟಾಗಿದ್ದು, ಏಮ್ಸ್ ವೈದ್ಯರು ಚಿಕಿತ್ಸೆ ನೀಡಿದ್ದರು. ಕಿಡ್ನಿ ತೊಂದರೆ ಕಾಣಿಸಿಕೊಂಡಿದ್ದರಿಂದ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ನೀಡಲಾಗಿದೆ. ಈಗ ಕಿಡ್ನಿ ಕಸಿ ಮಾಡಲು ವೈದ್ಯರು ಸಿದ್ಧತೆ ಮಾಡಿಕೊಂಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...