alex Certify
ಕನ್ನಡ ದುನಿಯಾ       Mobile App
       

Kannada Duniya

ಮಾಜಿ ಸಚಿವನ ಮೇಲೆ ದುಷ್ಕರ್ಮಿಯಿಂದ ಹಲ್ಲೆ

kapil-mis

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿದ್ದ ಮಾಜಿ ಸಚಿವ ಕಪಿಲ್ ಮಿಶ್ರಾ ಅವರ ಮೇಲೆ ಹಲ್ಲೆ ನಡೆಸಲಾಗಿದೆ.

ತಾವು ಮಾಡಿರುವ ಆರೋಪಗಳ ಕುರಿತಾಗಿ ಕೇಜ್ರಿವಾಲ್ ಸ್ಪಷ್ಟನೆ ನೀಡಬೇಕೆಂದು ಆಗ್ರಹಿಸಿ ಅವರು ಧರಣಿ ನಡೆಸುತ್ತಿದ್ದರು.

ಧರಣಿ ಸ್ಥಳಕ್ಕೆ ಬಂದ ಅಪರಿಚಿತನೊಬ್ಬ ಅವರ ಮೇಲೆ ಹಲ್ಲೆ ಮಾಡಿದ್ದಾನೆ. ಹಲ್ಲೆ ನಡೆಸಿದವನನ್ನು ಸಾರ್ವಜನಿಕರು ಹಿಡಿದು ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ.

ಸಚಿವ ಸತ್ಯೇಂದ್ರ ಜೈನ್ ಅವರಿಂದ 2 ಕೋಟಿ ರೂ. ಪಡೆದಿರುವ ಕೇಜ್ರಿವಾಲ್, ಸಂಬಂಧಿಯೊಬ್ಬರಿಗಾಗಿ 50 ಕೋಟಿ ರೂ. ಮೊತ್ತದ ಲ್ಯಾಂಡ್ ಡೀಲ್ ನಡೆಸಿದ್ದಾರೆ ಎಂದು ಕಪಿಲ್ ಮಿಶ್ರಾ ಆರೋಪಿಸಿದ್ದರು.

ಅಲ್ಲದೇ ಉಪ ರಾಜ್ಯಪಾಲರಿಗೂ ದೂರು ನೀಡಿದ್ದರು. ಈ ಬೆಳವಣಿಗೆಗಳ ಬೆನ್ನಲ್ಲೇ ಕಪಿಲ್ ಮಿಶ್ರಾ ಅವರನ್ನು ಸಚಿವ ಸ್ಥಾನದಿಂದ ಮತ್ತು ಪಕ್ಷದಿಂದ ಕೈ ಬಿಡಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...