alex Certify
ಕನ್ನಡ ದುನಿಯಾ       Mobile App
       

Kannada Duniya

ಶಾಕಿಂಗ್! ಶೌಚಾಲಯ ನಿರ್ಮಾಣದ ಹೆಸರಲ್ಲೂ ಹಣ ದೋಚಿದ ಖದೀಮರು…?

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಕನಸಿನ ಯೋಜನೆ ಸ್ವಚ್ಛ ಭಾರತ ಅಭಿಯಾನಕ್ಕೆ ಭಾರೀ ಮೆಚ್ಚುಗೆ ವ್ಯಕ್ತವಾಗಿದ್ದರೂ ತಮಿಳುನಾಡಿನಲ್ಲಿ ಕೆಲ ಅಧಿಕಾರಿಗಳು ಶೌಚಾಲಯ ನಿರ್ಮಾಣದ ಹೆಸರಿನಲ್ಲಿ ಭಾರೀ ಹಗರಣ ನಡೆಸಿರುವ ಶಂಕೆ ವ್ಯಕ್ತವಾಗಿದೆ.

ಬುಧವಾರದಂದು ಸ್ವಚ್ಛ ಭಾರತ್ ಮಿಷನ್ ವೆಬ್ ಸೈಟ್ ನಲ್ಲಿ ತಮಿಳುನಾಡಿನಲ್ಲಿ 41.79 ಲಕ್ಷ ಶೌಚಾಲಯ ನಿರ್ಮಾಣವಾಗಿದೆ ಎಂದು ಬೆಳಿಗ್ಗೆ ಪ್ರಕಟಿಸಿದ್ದರೆ, ಸಂಜೆ ವೇಳೆಗಾಗಲೆ ಮತ್ತೆ 6000 ಶೌಚಾಲಯ ಸೇರಿಕೊಂಡಿದ್ದು. ಒಟ್ಟು 48.16 ಲಕ್ಷ ಶೌಚಾಲಯ ನಿರ್ಮಾಣವಾಗಿದೆ ಎಂದು ತಿಳಿಸಲಾಗಿದೆ.

ಈ ಪ್ರಕಾರ ಕಳೆದ 2 ವರ್ಷಗಳಲ್ಲಿ ತಮಿಳುನಾಡಿನಲ್ಲಿ ಪ್ರತಿನಿತ್ಯ 4000 ಶೌಚಾಲಯ ನಿರ್ಮಾಣವಾಗಿದ್ದು, ರಾಷ್ಟ್ರ ಮಟ್ಟದಲ್ಲಿ ಈ ಸಂಖ್ಯೆ ದಿನಕ್ಕೆ 1700 ಶೌಚಾಲಯ ನಿರ್ಮಾಣವಾಗುತ್ತಿದೆ. ಸ್ವಚ್ಛ ಭಾರತ್ ಯೋಜನೆಯಲ್ಲಿ ತಮಿಳುನಾಡು ಸರ್ಕಾರ ಅಕ್ರಮ ನಡೆಸಿದೆ ಹಾಗೂ ಕೇಂದ್ರದಿಂದ ಹಣ ಮಂಜೂರು ಮಾಡಿಸಿಕೊಂಡಿದೆ ಎಂದು ಪ್ರತಿಪಕ್ಷ ನಾಯಕರು ಆರೋಪಿಸಿದ್ದು, ಕೇಂದ್ರ ಸರ್ಕಾರ ಈ ಕುರಿತು ಸಮಗ್ರ ತನಿಖೆ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...