alex Certify
ಕನ್ನಡ ದುನಿಯಾ       Mobile App
       

Kannada Duniya

ಭೀಕರ ಸರಣಿ ಅಪಘಾತದಲ್ಲಿ ಐವರ ಸಾವು

ಕೃಷ್ಣಗಿರಿ: ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಸೂಳಗಿರಿ ಬಳಿ ನಡೆದ ಭೀಕರ ಸರಣಿ ಅಪಘಾತದಲ್ಲಿ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಮೂವರು ಪುರುಷರು, ಇಬ್ಬರು ಮಹಿಳೆಯರು ಮೃತಪಟ್ಟಿದ್ದು, ಮೃತರನ್ನು ಬೆಂಗಳೂರು ಮೂಲದವರೆಂದು ಗುರುತಿಸಲಾಗಿದೆ. ಕೆ.ಎಸ್.ಆರ್.ಟಿ.ಸಿ. ಬಸ್, ಲಾರಿ ಹಾಗೂ ಕಾರಿನ ನಡುವೆ ಸರಣಿ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ 7 ಮಂದಿಯಲ್ಲಿ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಅಪಘಾತದ ತೀವ್ರತೆಗೆ ವಾಹನಗಳು ನಜ್ಜುಗುಜ್ಜಾಗಿವೆ. ಬಸ್ ನಲ್ಲಿದ್ದ 15 ಮಂದಿಗೆ ಹಾಗೂ ಕಾರಿನಲ್ಲಿದ್ದ ಇಬ್ಬರಿಗೆ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಸೂಳಗಿರಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...