alex Certify
ಕನ್ನಡ ದುನಿಯಾ       Mobile App
       

Kannada Duniya

ಕಾಲೇಜು ವಿದ್ಯಾರ್ಥಿಗಳಿಗೆ ಸರ್ಕಾರದಿಂದ ‘ಶಾಕ್’…!

ತಮಿಳುನಾಡಿನ ಕಾಲೇಜುಗಳಲ್ಲಿ ಮೊಬೈಲ್ ಫೋನ್ ನಿಷೇಧಿಸುವ ಕುರಿತು ಮಹತ್ವದ ಆದೇಶ ಹೊರಡಿಸಲಾಗಿದೆ. ರಾಜ್ಯ ಸರ್ಕಾರದ ಅಡಿ ಬರುವ ಎಲ್ಲ ಕಾಲೇಜುಗಳಿಗೆ ಅನ್ವಯಿಸುವಂತೆ ಜಂಟಿ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ. ಈ ಮೂಲಕ ವಿದ್ಯಾರ್ಥಿಗಳು ಕಾಲೇಜ್ ಕ್ಯಾಂಪಸ್ ಗಳಲ್ಲಿ ಮೊಬೈಲ್ ತರದಂತೆ ನಿಷೇಧ ಹೇರಿದ್ದಾರೆ.

ವಿದ್ಯಾರ್ಥಿಗಳು ತಮ್ಮ ಫೋನ್ ಕ್ಯಾಮೆರಾಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ. ಕೋ-ಎಜುಕೇಶನ್ ಸಂಸ್ಥೆಗಳಲ್ಲಿ ವಿದ್ಯಾರ್ಥಿಗಳು, ವಿದ್ಯಾರ್ಥಿನಿಯರ ದೃಶ್ಯವನ್ನು ಸೆರೆ ಹಿಡಿದ ಬಗ್ಗೆ ದೂರು ಬಂದ ಹಿನ್ನೆಲೆಯಲ್ಲಿ ಈ ಆದೇಶ ಹೊರಡಿಸಲಾಗಿದೆ.

ಕೆಲವು ಶಿಕ್ಷಣ ಸಂಸ್ಥೆಗಳು ಈ ಮೊದಲೇ ಮೊಬೈಲ್ ಫೋನ್ ಬ್ಯಾನ್ ಮಾಡಿದ್ದವು. ಆದ್ರೆ, ಪ್ರಸಕ್ತ ಯುಗಕ್ಕೆ ಅನುಗುಣವಾಗಿ ಸಂಪರ್ಕ ಕಲ್ಪಿಸುವ ಮೂಲ ಸಾಧನ ಎಂದು ಪರಿಗಣಿಸಿ, ಕ್ಲಾಸ್ ರೂಮ್ ಗಳಲ್ಲಿ ಮಾತ್ರ ನಿಷೇಧ ಹೇರಲಾಗಿತ್ತು. ಅಲ್ಲದೆ ವಿದ್ಯಾರ್ಥಿಗಳು ಕ್ಯಾಂಪಸ್ ನಲ್ಲಿ ಮೊಬೈಲ್ ಬಳಕೆ ಮಾಡಲು ಅವಕಾಶ ನೀಡಲಾಗಿತ್ತು.

ಸರ್ಕಾರದ ನಿರ್ಣಯದ ವಿರುದ್ಧ ವಿದ್ಯಾರ್ಥಿಗಳು ಧ್ವನಿ ಎತ್ತಿದ್ದಾರೆ. ವಿದ್ಯಾರ್ಥಿಗಳಿಗೆ ಮೊಬೈಲ್ ಅವಶ್ಯಕತೆ ತುಂಬಾ ಇದೆ. ಅಂತರ್ಜಾಲ ಹಾಗೂ ಸಂಪರ್ಕಕ್ಕೆ ಮೊಬೈಲ್ ಅತ್ಯವಶ್ಯಕ. ಮೊಬೈಲ್ ನಿಂದ ಜ್ಞಾನಾಭಿವೃದ್ಧಿಗೆ ಸಹಾಯವಾಗುತ್ತಿದೆ ಎಂದು ತಿಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...