alex Certify
ಕನ್ನಡ ದುನಿಯಾ       Mobile App
       

Kannada Duniya

ಮಹಿಳಾ ಪತ್ರಕರ್ತೆಯ ಕೆನ್ನೆ ತಟ್ಟಿ ವಿವಾದಕ್ಕೆ ಸಿಲುಕಿದ ರಾಜ್ಯಪಾಲ

ಪರೀಕ್ಷೆಯಲ್ಲಿ ಹೆಚ್ಚು ಅಂಕ ಬೇಕೆಂದರೆ ಅಧಿಕಾರಿಗಳ ಜೊತೆ ಸಹಕರಿಸಬೇಕು ಎಂದು ಹೇಳಿದ್ದ ತಮಿಳುನಾಡಿನ ಅರುಪುಕೊಟೈನ ದೇವಾಂಗ್ ಆರ್ಟ್ ಕಾಲೇಜಿನ ಉಪನ್ಯಾಸಕಿ ನಿರ್ಮಲಾ ದೇವಿ ಇದೀಗ ಪೊಲೀಸರ ವಶದಲ್ಲಿದ್ದು, ಈಕೆ ವಿದ್ಯಾರ್ಥಿನಿಯರೊಂದಿಗೆ ನಡೆಸಿದ ಸಂಭಾಷಣೆ ವೈರಲ್ ಆಗಿತ್ತು. ಇದರಲ್ಲಿ ತಮಿಳುನಾಡು ರಾಜ್ಯಪಾಲ ಬನ್ವಾರಿಲಾಲ್ ಪುರೋಹಿತ್ ತನಗೆ ಆತ್ಮೀಯರೆಂದು ಹೇಳಿಕೊಂಡಿದ್ದು, ಈ ಕುರಿತಂತೆ ಸ್ಪಷ್ಟನೆ ನೀಡಲು ಕರೆದಿದ್ದ ಪತ್ರಿಕಾಗೋಷ್ಟಿಯಲ್ಲಿ ರಾಜ್ಯಪಾಲರು ಮತ್ತೊಂದು ಯಡವಟ್ಟು ಮಾಡಿಕೊಂಡಿದ್ದಾರೆ.

ಮಂಗಳವಾರ ಸಂಜೆ ರಾಜಭವನದಲ್ಲಿ ಪತ್ರಿಕಾಗೋಷ್ಟಿ ಕರೆದಿದ್ದ ರಾಜ್ಯಪಾಲ 78 ವರ್ಷದ ಬನ್ವಾರಿಲಾಲ್ ಪುರೋಹಿತ್, ಬಂಧಿತರಾಗಿರುವ ಉಪನ್ಯಾಸಕಿಯ ಮುಖವನ್ನೇ ತಾವು ನೋಡಿಲ್ಲ. ಪ್ರಕರಣದಲ್ಲಿ ವೃಥಾ ತಮ್ಮ ಹೆಸರನ್ನು ಎಳೆದು ತರಲಾಗಿದೆ ಎಂದರಲ್ಲದೇ ಈ ಕುರಿತು ತನಿಖೆ ನಡೆದ ಬಳಿಕ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಬಳಿಕ ‘ದಿ ವೀಕ್’ ನ ವರದಿಗಾರ್ತಿ ಲಕ್ಷ್ಮೀ ಸುಬ್ರಮಣಿಯನ್, ರಾಜ್ಯಪಾಲರಿಗೆ ಪ್ರಶ್ನೆಯೊಂದನ್ನು ಕೇಳಿದ್ದು, ಇದಕ್ಕೆ ಉತ್ತರಿಸುವ ಬದಲು ಬನ್ವಾರಿಲಾಲ್ ಪುರೋಹಿತ್ ಆಕೆಯ ಕೆನ್ನೆ ತಟ್ಟಿದ್ದಾರೆ. ಇದರಿಂದ ತೀವ್ರ ಮುಜುಗರಕ್ಕೊಳಗಾದ ಲಕ್ಷ್ಮೀ ಸುಬ್ರಮಣಿಯನ್ ಬಳಿಕ ಸರಣಿ ಟ್ವೀಟ್ ಮಾಡಿ ರಾಜ್ಯಪಾಲರ ವರ್ತನೆಯನ್ನು ಖಂಡಿಸಿದ್ದಾರೆ. ಸಮ್ಮತಿಯಿಲ್ಲದೇ ಅಪರಿಚಿತ ವ್ಯಕ್ತಿಯನ್ನು ಸ್ಪರ್ಷಿಸುವುದು ಎಷ್ಟು ಸರಿ ಎಂದು ಪ್ರಶ್ನಿಸಿದ್ದಾರೆ. ಡಿಎಂಕೆ ನಾಯಕ ಸ್ಟಾಲಿನ್, ರಾಜ್ಯಸಭಾ ಸದಸ್ಯೆ ಕನಿಮೋಳಿ ಮೊದಲಾದವರೂ ಸಹ ರಾಜ್ಯಪಾಲರ ವರ್ತನೆಯನ್ನು ಖಂಡಿಸಿದ್ದು, ಸಂವಿಧಾನಾತ್ಮಕ ಹುದ್ದೆಯಲ್ಲಿರುವವರು ಘನತೆಯಿಂದ ನಡೆದುಕೊಳ್ಳಬೇಕು ಎಂದಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...