alex Certify
ಕನ್ನಡ ದುನಿಯಾ       Mobile App
       

Kannada Duniya

ಜಯಲಲಿತಾ ಸಾವಿನ ತನಿಖೆಗೆ ನಿವೃತ್ತ ಜಡ್ಜ್ ನೇಮಕ

ಚೆನ್ನೈ: ಮಾಜಿ ಮುಖ್ಯಮಂತ್ರಿ ಜೆ. ಜಯಲಲಿತಾ ಅವರ ಸಾವಿನ ಕುರಿತಾಗಿ ನ್ಯಾಯಾಂಗ ತನಿಖೆಗೆ ಆದೇಶಿಸಿದ್ದ ತಮಿಳುನಾಡು ಸರ್ಕಾರ ನಿವೃತ್ತ ನ್ಯಾಯಾಧೀಶರನ್ನು ನೇಮಿಸಿದೆ.

ಮದ್ರಾಸ್ ಹೈಕೋರ್ಟ್ ನಿವೃತ್ತ ನ್ಯಾಯಾಧೀಶರಾದ ಆರ್ಮುಗಸ್ವಾಮಿ ಅವರ ನೇತೃತ್ವದಲ್ಲಿ ತನಿಖೆ ನಡೆಯಲಿದೆ.

ಸುದೀರ್ಘ ಅವಧಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದರೂ, ಜಯಲಲಿತಾ ನಿಗೂಢವಾಗಿ ಸಾವು ಕಂಡಿದ್ದರು. ಅವರ ಸಾವಿನ ಕುರಿತಾಗಿ ಅನುಮಾನಗಳಿದ್ದು, ತನಿಖೆ ನಡೆಸಬೇಕೆಂದು ವ್ಯಾಪಕ ಒತ್ತಾಯ ಕೇಳಿ ಬಂದಿತ್ತು.

ಮುಖ್ಯಮಂತ್ರಿ ಕೆ. ಪಳನಿಸ್ವಾಮಿ, ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ವಹಿಸುವುದಾಗಿ ಹೇಳಿದ್ದರು. ಸಚಿವ ದಿಂಡಿಗಲ್ ಶ್ರೀನಿವಾಸನ್ ಅವರು, ಜಯಲಲಿತಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಂದರ್ಭದಲ್ಲಿ ಅವರ ಆರೋಗ್ಯದ ಕುರಿತಾಗಿ ಸುಳ್ಳು ಹೇಳಲಾಗಿತ್ತು ಎಂದು ಹೇಳಿಕೆ ನೀಡಿದ್ದರು.

ಜಯಾ ಸಾವಿನ ಕುರಿತ ತನಿಖೆಗೆ ವ್ಯಾಪಕ ಒತ್ತಾಯ ಕೇಳಿಬಂದ ಹಿನ್ನಲೆಯಲ್ಲಿ, ನಿವೃತ್ತ ನ್ಯಾಯಾಧೀಶ ಆರ್ಮುಗಸ್ವಾಮಿ ಅವರನ್ನು ತನಿಖಾ ಆಯೋಗಕ್ಕೆ ನೇಮಕ ಮಾಡಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...