alex Certify
ಕನ್ನಡ ದುನಿಯಾ       Mobile App
       

Kannada Duniya

ಈ ಶಿಕ್ಷಕರ ಕಾರ್ಯಕ್ಕೆ ನೀವೂ ತಪ್ಪದೆ ಹೇಳ್ತೀರಿ ಹ್ಯಾಟ್ಸಾಫ್

ಮಕ್ಕಳ ಏಳಿಗೆಗೆ ಗುರುಗಳು ಹಗಲಿರುಳು ಎನ್ನದೇ ಶ್ರಮಿಸುತ್ತಾರೆ. ತಮ್ಮ ಕೈಲಾದ ಸಹಾಯವನ್ನು ಹಲವು ಶಿಕ್ಷಕರು ವಿದ್ಯಾರ್ಥಿಗಳಿಗೆ ಮಾಡಿದ್ದನ್ನು ನೋಡಿದ್ದೇವೆ. ಅಂತೆಯೇ ತಮಿಳುನಾಡಿನಲ್ಲಿ ಶಿಕ್ಷಕರೊಬ್ಬರು ತಮ್ಮ ಸ್ವಂತ ಖರ್ಚಿನಲ್ಲಿ, ವಿದ್ಯಾರ್ಥಿಗಳಿಗೆ ಬೆಳಗಿನ ಉಪಹಾರವನ್ನು ನೀಡುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ.

ಕೊಡುಂಗಾಯೂರ್ ನಲ್ಲಿ ಪಿ.ಕೆ. ಇಲಾಮಾರನ್ ಎಂಬ ಈ ಶಿಕ್ಷಕ, ಹಲವು ವರ್ಷಗಳಿಂದ ಮಕ್ಕಳಿಗೆ ಬೆಳಗಿನ ಉಪಹಾರ ನೀಡುತ್ತಿದ್ದಾರೆ. ಶಾಲೆಗೆ ಬರುವ ಆತುರದಲ್ಲಿ ವಿದ್ಯಾರ್ಥಿಗಳು ತಿಂಡಿ ತಿನ್ನದೇ ಬರುವುದು. ಇಲ್ಲಾ ಮನೆಯ ಆರ್ಥಿಕ ಪರಿಸ್ಥಿತಿ ಚೆನ್ನಾಗಿಲ್ಲದೇ ಬೆಳಗ್ಗೆ ಖಾಲಿ ಹೊಟ್ಟೆಯಿಂದ ಬರೋದನ್ನು ಕಂಡು, ಶಿಕ್ಷಕರು ಈ ಕೆಲಸಕ್ಕೆ ಮುಂದಾಗಿದ್ದಾರೆ.

ಇಲಾಮಾರನ್ 120 ವಿದ್ಯಾರ್ಥಿಗಳಿಗೆ ಪ್ರತಿನಿತ್ಯ ಉಪಹಾರ ನೀಡುತ್ತಾರೆ. ಉಪಹಾರಕ್ಕೆ ಇಡ್ಲಿ ಅಥವಾ ಪೊಂಗಲ್ ನೀಡಲಾಗುತ್ತದೆ. ಶಿಕ್ಷಕ ಇಲಾಮಾರನ್ ಒಂದನೇ ತರಗತಿಯಿಂದ ಹತ್ತನೇ ತರಗತಿಯ ಮಕ್ಕಳಿಗೆ ಉಚಿತ ಉಪಹಾರ ನೀಡುತ್ತಾರೆ. 10 ನೇ ಕ್ಲಾಸ್ ವಿದ್ಯಾರ್ಥಿಗಳಿಗೆ ಬೆಳಗ್ಗೆ 7.30 ರಿಂದ 8 ರ ವರೆಗೆ ಉಪಹಾರ ನೀಡಿದ್ರೆ, ಉಳಿದ ವಿದ್ಯಾರ್ಥಿಗಳಿಗೆ 8.20 ರಿಂದ 8.50 ರ ವರೆಗೂ ನೀಡುತ್ತಾರೆ. ಅಷ್ಟೇ ಅಲ್ಲ ವಿದ್ಯಾರ್ಥಿಗಳ ಉತ್ತಮ ಭವಿಷ್ಯ ರೂಪಿಸಲು ಪ್ಲಾನ್ ಹಾಕಿಕೊಂಡಿರುವ ಇವರು, ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ಉಚಿತ ಟ್ಯೂಶನ್‍ ನೀಡಲು ಮುಂದಾಗಿದ್ದಾರೆ. ನಾಲ್ಕು ವರ್ಷದ ಹಿಂದೆ ಈ ಶಾಲೆಯಲ್ಲಿ 370 ಇದ್ದ ವಿದ್ಯಾರ್ಥಿಗಳ ಸಂಖ್ಯೆ, ಈಗ 980 ಮುಟ್ಟಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...