alex Certify
ಕನ್ನಡ ದುನಿಯಾ       Mobile App
       

Kannada Duniya

ಚಿರತೆಯನ್ನೇ ಕೊಚ್ಚಿ ಕೊಂದ ಹಸು ಮಾಲೀಕ

ಕೃಷ್ಣಗಿರಿ : ಕೊಟ್ಟಿಗೆಯಲ್ಲಿದ್ದ ಹಸು, ಕರುವಿನ ಮೇಲೆ ದಾಳಿ ಮಾಡಿದ ಚಿರತೆಯನ್ನು ಮಚ್ಚಿನಿಂದ ಕೊಚ್ಚಿ ಕೊಲೆಗೈದ ಘಟನೆ ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಮಹಾರಾಜಕಟ್ಟೆಯಲ್ಲಿ ನಡೆದಿದೆ.

ರಾಮಮೂರ್ತಿ ಎಂಬುವವರೇ ಚಿರತೆಯನ್ನು ಕೊಂದವರು. ಮನೆಯ ಸಮೀಪದ ಕೊಟ್ಟಿಗೆಯಲ್ಲಿ ಕಟ್ಟಿದ್ದ ಹಸು, ಕರುವಿನ ಮೇಲೆ ಚಿರತೆ ದಾಳಿ ಮಾಡಿದ್ದು, ಜಾನುವಾರು ಕೂಗಾಟ ಕೇಳಿ ಸ್ಥಳಕ್ಕೆ ಬಂದ ರಾಮಮೂರ್ತಿ, ಮಚ್ಚಿನಿಂದ ಚಿರತೆ ಮೇಲೆ ಹಲ್ಲೆ ಮಾಡಿದ್ದಾರೆ.

ಮಚ್ಚಿನೇಟಿಗೆ ಗಾಯಗೊಂಡ ಚಿರತೆ ಸಾವನ್ನಪ್ಪಿದ್ದು, ಸ್ಥಳಕ್ಕೆ ಕೃಷ್ಣಗಿರಿ ಪೊಲೀಸರು ಮತ್ತು ಅರಣ್ಯ ಇಲಾಖೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...