alex Certify
ಕನ್ನಡ ದುನಿಯಾ       Mobile App
       

Kannada Duniya

ಶಾಕಿಂಗ್: ಗರ್ಭಪಾತ ಮಾಡಿಸಿಕೊಳ್ಳುವಂತೆ ಸಚಿವರಿಂದ ಯುವತಿಗೆ ಒತ್ತಾಯ

ತಮಿಳುನಾಡು ಮೀನುಗಾರಿಕಾ ಸಚಿವ ಡಿ. ಜಯಕುಮಾರ್ ಅವರು ಮಹಿಳೆಯೊಬ್ಬರಿಗೆ ಗರ್ಭಪಾತ ಮಾಡಿಸಿಕೊಳ್ಳುವಂತೆ ಒತ್ತಾಯಿಸಿದ್ದಾರೆ ಎನ್ನುವ ಆಘಾತಕಾರಿ ಸುದ್ದಿ ಇದೀಗ ಭಾರಿ ವಿವಾದಕ್ಕೆ ಎಡೆಮಾಡಿಕೊಟ್ಟಿದೆ.

ಸಚಿವ ಜಯಕುಮಾರ್ ಅವರ ಧ್ವನಿಯನ್ನೇ ಹೋಲುವ ಆಡಿಯೋವೊಂದು ಇದೀಗ ಭಾರಿ ವೈರಲ್ ಆಗಿದ್ದು, ಆಡಿಯೋದಲ್ಲಿ ಪ್ರಮುಖವಾಗಿ ಗರ್ಭಪಾತ ಮಾಡಿಸುವ ಬಗ್ಗೆ ಚರ್ಚಿಸಿದ್ದಾರೆ. ಆದರೆ ಈ ಬಗ್ಗೆ ತಮಿಳುನಾಡು ಸರಕಾರ ಅಥವಾ ಸಚಿವರು ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ತಮಿಳುನಾಡು ಸರಕಾರದಲ್ಲಿ ಸಚಿವರಾಗಿ ಕಾರ್ಯನಿರ್ವಹಿಸುತ್ತಿರುವ ಜಯಕುಮಾರ್ ಅವರು ಫೋನ್ ನಲ್ಲಿ ಈ ರೀತಿ ಮಾತನಾಡಿದ್ದಾರೆ ಎನ್ನುವ ಆಡಿಯೋ ಬಹಿರಂಗವಾಗುವ ಮೂಲಕ, ಎಐಎಡಿಎಂಕೆ ಮತ್ತೊಂದು ವಿವಾದದಲ್ಲಿ ಸಿಲುಕಿದೆ.

ಸ್ಥಳೀಯ ಮಾಧ್ಯಮಗಳು ಈ ದೂರವಾಣಿಯಲ್ಲಿ ಮಾತನಾಡಿರುವ ಆಡಿಯೋ ಬಿಡುಗಡೆ ಮಾಡುತ್ತಿದ್ದಂತೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಸರಕಾರ ಇಕ್ಕಟ್ಟಿಗೆ ಸಿಲುಕಿದೆ.

ಆಡಿಯೋದಲ್ಲಿ ಜಯಕುಮಾರ್ ಅವರು, ಯುವತಿಯೊಂದಿಗೆ ಮಾತನಾಡುವಾಗ ಗರ್ಭದಲ್ಲಿರುವ ಭೂಣ್ರವನ್ನು ತೆಗೆಸುವಂತೆ ಸೂಚಿಸಿದ್ದು, ಇದಕ್ಕೆ ಸಂಬಂಧಿಸಿದ ಹಣಕಾಸು ನೆರವನ್ನು ನೀಡುವುದಾಗಿ ಹೇಳಿದ್ದಾರೆ. ಇದರೊಂದಿಗೆ ಚೆನ್ನೈ ಆಸ್ಪತ್ರೆಯಲ್ಲಿ ಭ್ರೂಣ ಹತ್ಯೆಗೆ ಅಗತ್ಯವಿರುವ ವ್ಯವಸ್ಥೆಯನ್ನು ಮಾಡುವುದಾಗಿ ಭರವಸೆ ನೀಡಿದ್ದಾರೆ.

ಮೂಲಗಳ ಪ್ರಕಾರ ಸಚಿವರು ಮಾತನಾಡಿರುವುದು 26 ವರ್ಷದ ಮಹಿಳೆಯೊಂದಿಗೆ ಎನ್ನಲಾಗಿದ್ದು, ಕಳೆದ ವರ್ಷ ಸಚಿವರ ಬಳಿ ಸರಕಾರ ಕೆಲಸ ಕೇಳಿಕೊಂಡು ಬಂದಿದ್ದರು. ಈ ವೇಳೆ ಆಕೆಯೊಂದಿಗೆ ಸಚಿವರು ದೈಹಿಕ ಸಂಬಂಧ ಬೆಳಸಿದ್ದರಿಂದ ಸಂತ್ರಸ್ತೆ ಗರ್ಭಿಣಿಯಾಗಿದ್ದಾಳೆ. ಆದ್ದರಿಂದ ಮಗು ಜನಿಸುವ ಮೊದಲೇ, ಅದನ್ನು ತೆಗೆಸುವಂತೆ ಹೇಳಿರುವ ಜಯಕುಮಾರ್, ತನ್ನನ್ನು ಭೇಟಿಯಾಗುವಂತೆ ಹೇಳಿರುವ ಆಡಿಯೋ ಬಹಿರಂಗವಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...