alex Certify
ಕನ್ನಡ ದುನಿಯಾ       Mobile App
       

Kannada Duniya

ಮುಂದುವರೆದ ತಮಿಳುನಾಡು ರಾಜಕೀಯ ಬಿಕ್ಕಟ್ಟು

pan-che

ಚೆನ್ನೈ: ಎ.ಐ.ಎ.ಡಿ.ಎಂ.ಕೆ. ಪಕ್ಷದಲ್ಲಿನ ಬೆಳವಣಿಗೆಗಳು ದಿನಕ್ಕೊಂದು, ಕ್ಷಣಕ್ಕೊಂದು ತಿರುವು ಪಡೆಯುತ್ತಿದ್ದು, ದಿನೇ, ದಿನೇ ಪನ್ನೀರ್ ಸೆಲ್ವಂ ಬೆಂಬಲಿಸುವ ಶಾಸಕರ ಸಂಖ್ಯೆ ಹೆಚ್ಚಾಗತೊಡಗಿದೆ.

ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡಿರುವ ಪನ್ನೀರ್ ಸೆಲ್ವಂ ಹಂಗಾಮಿ ಮುಖ್ಯಮಂತ್ರಿಯಾಗಿದ್ದಾರೆ. ಇಂದು ಸಚಿವಾಲಯಕ್ಕೆ ಭೇಟಿ ನೀಡಲಿರುವ ಅವರು ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ.

ಶಶಿಕಲಾ ನಟರಾಜನ್, ಸರ್ಕಾರ ರಚನೆಗೆ ಅವಕಾಶ ನೀಡದ ರಾಜ್ಯಪಾಲರ ನಡೆ ಬಗ್ಗೆ ಆಕ್ಷೇಪಿಸಿದ್ದಾರೆ. ಶಾಸಕರು ತಂಗಿರುವ ರೆಸಾರ್ಟ್ ಗೆ ತೆರಳಿದ್ದ ಶಶಿಕಲಾ ಮಾಧ್ಯಮಗಳ ಎದುರು ತಮಗಿರುವ ಬೆಂಬಲಿಗ ಶಾಸಕರ ಸಂಖ್ಯೆ ಬಗ್ಗೆ ತಿಳಿಸಿದ್ದಾರೆ.

ಇನ್ನು ಮದ್ರಾಸ್ ಹೈ ಕೋರ್ಟ್ ಸೂಚನೆಯಂತೆ ಶಾಸಕರನ್ನು ಬಲವಂತವಾಗಿ ಕೂಡಿಹಾಕಲಾಗಿದೆಯೇ ಎಂಬುದರ ಕುರಿತು ಚೆನ್ನೈ ಪೊಲೀಸರು ಇಂದು ವರದಿ ಸಲ್ಲಿಸಲಿದ್ದಾರೆ.

ಕೋರ್ಟ್ ಸೂಚನೆಯಂತೆ ರೆಸಾರ್ಟ್ ಗೆ ತೆರಳಿ ಈಗಾಗಲೇ ಶಾಸಕರಿಂದ ಮಾಹಿತಿ ಪಡೆದುಕೊಂಡಿರುವ ಪೊಲೀಸರು, ವರದಿ ಸಲ್ಲಿಸಲಿದ್ದಾರೆ. ಇದರೊಂದಿಗೆ ಶಾಸಕರ ನಾಪತ್ತೆ ಕುರಿತಾಗಿ ಸಲ್ಲಿಕೆಯಾಗಿರುವ ಹೇಬಿಯಸ್ ಕಾರ್ಪಸ್ ಅರ್ಜಿಯ ವಿಚಾರಣೆ ಇಂದು ನಡೆಯಲಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...