alex Certify
ಕನ್ನಡ ದುನಿಯಾ       Mobile App
       

Kannada Duniya

ಕರುಣಾನಿಧಿಯವರ ಅಂತಿಮ ದರ್ಶನಕ್ಕಾಗಿ ಹರಿದುಬರುತ್ತಿದೆ ಜನಸಾಗರ

ಮಂಗಳವಾರದಂದು ಚೆನ್ನೈನ ಕಾವೇರಿ ಆಸ್ಪತ್ರೆಯಲ್ಲಿ ವಿಧಿವಶರಾದ ತಮಿಳುನಾಡು ಮಾಜಿ ಮುಖ್ಯಮಂತ್ರಿ ಕರುಣಾನಿಧಿಯವರ ಪಾರ್ಥಿವ ಶರೀರವನ್ನು ಸಾರ್ವಜನಿಕರ ಅಂತಿಮ ದರ್ಶನಕ್ಕಾಗಿ ರಾಜಾಜಿ ಹಾಲ್ ನಲ್ಲಿ ಇರಿಸಲಾಗಿದ್ದು, ನೆಚ್ಚಿನ ನಾಯಕನ ದರ್ಶನಕ್ಕಾಗಿ ಜನಸಾಗರವೇ ಹರಿದುಬರುತ್ತಿದೆ.

ಕಳೆದ ರಾತ್ರಿ ಕರುಣಾನಿಧಿಯವರ ಪುತ್ರಿ ಕನಿಮೋಳಿ ನಿವಾಸದಲ್ಲಿ ಕುಟುಂಬ ಸದಸ್ಯರು ಅಂತಿಮ ದರ್ಶನ ಪಡೆದಿದ್ದು, ಬೆಳಗ್ಗೆ ರಾಜಾಜಿ ಹಾಲ್ ಗೆ ಪಾರ್ಥಿವ ಶರೀರವನ್ನು ತರಲಾಯಿತು. ಅಪಾರ ಸಂಖ್ಯೆಯ ಅಭಿಮಾನಿಗಳು ರಾತ್ರಿಯಿಂದಲೇ ರಾಜಾಜಿ ಹಾಲ್ ಬಳಿ ಕಾದು ಕುಳಿತಿದ್ದು, ಪಾರ್ಥಿವ ಶರೀರ ಬರುತ್ತಲೇ ಅಂತಿಮ ದರ್ಶನಕ್ಕಾಗಿ ಮುಗಿಬಿದ್ದರು.

ತಮಿಳುನಾಡಿನ ವಿವಿಧ ಭಾಗಗಳಿಂದ ಡಿಎಂಕೆ ಕಾರ್ಯಕರ್ತರು, ಅಭಿಮಾನಿಗಳು ಚೆನ್ನೈನತ್ತ ಧಾವಿಸುತ್ತಿದ್ದು, ಇಂದು ಸಂಜೆಯವರೆಗೂ ಗಣ್ಯರು ಹಾಗೂ ಸಾರ್ವಜನಿಕರ ಅಂತಿಮ ದರ್ಶನಕ್ಕಾಗಿ ಪಾರ್ಥಿವ ಶರೀರವನ್ನು ಇರಿಸಲಾಗುತ್ತದೆ ಎಂದು ತಿಳಿದು ಬಂದಿದೆ.

ತಮಿಳು ಚಿತ್ರರಂಗದ ಖ್ಯಾತ ನಟ ರಜನಿಕಾಂತ್ ಇಂದು ಬೆಳಗ್ಗೆ ತಮ್ಮ ಕುಟುಂಬ ಸದಸ್ಯರೊಂದಿಗೆ ರಾಜಾಜಿ ಹಾಲ್ ಗೆ ಭೇಟಿ ನೀಡಿದ್ದು ಕರುಣಾನಿಧಿಯವರ ಅಂತಿಮ ದರ್ಶನ ಪಡೆದಿದ್ದಾರೆ. ಮುಖ್ಯಮಂತ್ರಿ ಎಡಪ್ಪಾಡಿ ಪಳನಿಸ್ವಾಮಿ ಸಹ ತಮ್ಮ ಸಚಿವ ಸಂಪುಟ ಸಹೋದ್ಯೋಗಿಗಳೊಂದಿಗೆ ರಾಜಾಜಿ ಹಾಲ್ ಗೆ ಭೇಟಿ ನೀಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...