alex Certify
ಕನ್ನಡ ದುನಿಯಾ       Mobile App
       

Kannada Duniya

ಕರುಣಾನಿಧಿಯವರ ಅಂತಿಮ ದರ್ಶನಕ್ಕಾಗಿ ಚೆನ್ನೈಗೆ ಆಗಮಿಸಿದ ಪ್ರಧಾನಿ ಮೋದಿ

ಮಂಗಳವಾರದಂದು ವಿಧಿವಶರಾದ ತಮಿಳುನಾಡು ಮಾಜಿ ಮುಖ್ಯಮಂತ್ರಿ ಎಂ. ಕರುಣಾನಿಧಿಯವರ ಅಂತಿಮ ಸಂಸ್ಕಾರ ಇಂದು ನೆರವೇರಲಿದೆ. ಈ ಹಿನ್ನೆಲೆಯಲ್ಲಿ ಕರುಣಾನಿಧಿ ಅವರ ಅಂತಿಮ ದರ್ಶನಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಚೆನ್ನೈಗೆ ಆಗಮಿಸಿದ್ದಾರೆ.

ಗಣ್ಯರು ಹಾಗೂ ಸಾರ್ವಜನಿಕರ ಅಂತಿಮ ದರ್ಶನಕ್ಕಾಗಿ ಚೆನ್ನೈನ ರಾಜಾಜಿ ಹಾಲ್ ನಲ್ಲಿ ಕರುಣಾನಿಧಿ ಅವರ ಪಾರ್ಥಿವ ಶರೀರವನ್ನು ಇರಿಸಲಾಗಿದ್ದು, ಈಗಾಗಲೇ ಸಹಸ್ರಾರು ಮಂದಿ ಅಂತಿಮ ದರ್ಶನ ಪಡೆದಿದ್ದಾರೆ.

ಚೆನ್ನೈಗೆ ಆಗಮಿಸಿದ ಪ್ರಧಾನಿ ಮೋದಿ ಅವರನ್ನು ತಮಿಳುನಾಡು ಮುಖ್ಯಮಂತ್ರಿ ಎಡಪ್ಪಾಡಿ ಪಳನಿಸ್ವಾಮಿ ಉಪಮುಖ್ಯಮಂತ್ರಿ ಪನ್ನೀರ್ ಸೆಲ್ವಂ ಸೇರಿದಂತೆ ತಮಿಳುನಾಡು ಸರ್ಕಾರದ ಪ್ರತಿನಿಧಿಗಳು ಸ್ವಾಗತಿಸಿದ್ದು, ಕರುಣಾನಿಧಿಯವರ ಅಂತಿಮ ದರ್ಶನಕ್ಕಾಗಿ ನರೇಂದ್ರ ಮೋದಿಯವರು ರಾಜಾಜಿ ಹಾಲ್ ಗೆ ತೆರಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...