alex Certify
ಕನ್ನಡ ದುನಿಯಾ       Mobile App
       

Kannada Duniya

ರಾಜಾಜಿ ಹಾಲ್ ತಲುಪಿದ ಕರುಣಾನಿಧಿಯವರ ಪಾರ್ಥಿವ ಶರೀರ

ಮಂಗಳವಾರ ವಿಧಿವಶರಾದ ತಮಿಳುನಾಡು ಮಾಜಿ ಮುಖ್ಯಮಂತ್ರಿ ಕರುಣಾನಿಧಿ ಅವರ ಪಾರ್ಥಿವ ಶರೀರವನ್ನು ಗಣ್ಯರು ಹಾಗೂ ಸಾರ್ವಜನಿಕರ ಅಂತಿಮ ದರ್ಶನಕ್ಕಾಗಿ ಚೆನ್ನೈನ ರಾಜಾಜಿ ಹಾಲ್ ನಲ್ಲಿ ಇರಿಸಲಾಗಿದೆ.

ಕಾವೇರಿ ಆಸ್ಪತ್ರೆಯಲ್ಲಿ ಕರಣಾನಿಧಿಯವರು ನಿಧನರಾಗಿದ್ದು, ಬಳಿಕ ಪಾರ್ಥಿವ ಶರೀರವನ್ನು ಅವರ ಪುತ್ರಿ ಕನಿಮೋಳಿಯವರ ನಿವಾಸಕ್ಕೆ ಕೊಂಡೊಯ್ಯಲಾಗಿತ್ತು. ಅಲ್ಲಿ ಕರುಣಾನಿಧಿಯವರ ಕುಟುಂಬ ಸದಸ್ಯರು ಹಾಗೂ ಆಪ್ತರು ಅಂತಿಮ ದರ್ಶನ ಪಡೆದಿದ್ದಾರೆ.

ಇಂದು ಬೆಳಿಗ್ಗೆ ರಾಜಾಜಿ ಹಾಲ್ ಗೆ ಪಾರ್ಥಿವ ಶರೀರವನ್ನು ತರಲಾಗಿದ್ದು, ರಾತ್ರಿ ಇಡೀ ಇಲ್ಲಿ ಕಾದು ಕುಳಿತಿದ್ದ ಅಭಿಮಾನಿಗಳು ತಮ್ಮ ನೆಚ್ಚಿನ ನಾಯಕನ ಮೃತದೇಹವನ್ನು ಕಾಣುತ್ತಲೇ ದುಃಖದ ಕಟ್ಟೆಯೊಡೆದಿತ್ತು.

ರಾಜಾಜಿ ಹಾಲ್ ನಲ್ಲಿ ಗಣ್ಯರು ಹಾಗೂ ಸಾರ್ವಜನಿಕರ ಅಂತಿಮ ದರ್ಶನಕ್ಕಾಗಿ ಸಕಲ ವ್ಯವಸ್ಥೆಯನ್ನು ಮಾಡಲಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ರಾಜಕೀಯ ನಾಯಕರು ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ ಬಿಗಿ ಭದ್ರತೆಯನ್ನು ಕೈಗೊಳ್ಳಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...