alex Certify
ಕನ್ನಡ ದುನಿಯಾ       Mobile App
       

Kannada Duniya

ಜಯಾ ಅಂತ್ಯಸಂಸ್ಕಾರಕ್ಕೆ ಗಣ್ಯರ ದಂಡು

jay-4-a

ಚೆನ್ನೈ: ದೀರ್ಘ ಕಾಲದ ಅನಾರೋಗ್ಯದಿಂದ ನಿಧನರಾದ ಜಯಲಲಿತಾ ಅವರ ಅಂತ್ಯಕ್ರಿಯೆ, ಮರೀನಾ ಬೀಚ್ ನಲ್ಲಿರುವ ಮಾಜಿ ಮುಖ್ಯಮಂತ್ರಿ ಎಂ.ಜಿ.ಆರ್. ಸಮಾಧಿ ಸಮೀಪ ನಡೆಯಲಿದೆ.

ರಾಜಾಜಿ ಹಾಲ್ ನಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಲಕ್ಷಾಂತರ ಮಂದಿ ಅಗಲಿದ ‘ಅಮ್ಮ’ನ ದರ್ಶನ ಪಡೆದು ಕಣ್ಣೀರಿಟ್ಟಿದ್ದಾರೆ. ಪ್ರವಾಹದ ರೀತಿಯಲ್ಲಿ ಜನ ದರ್ಶನಕ್ಕೆ ಬರುತ್ತಿದ್ದು, ತಮಿಳುನಾಡಿನಾದ್ಯಂತ ಶೋಕ ಮಡುಗಟ್ಟಿದೆ. ಜನ ಶಾಂತ ರೀತಿಯಲ್ಲಿ ಸರದಿ ಸಾಲಿನಲ್ಲಿ ಬಂದು ದರ್ಶನ ಪಡೆಯುತ್ತಿದ್ದು, ಕೆಲವರು ನುಗ್ಗಲು ಯತ್ನಿಸಿದ ಸಂದರ್ಭದಲ್ಲಿ ಪೊಲೀಸರು ತಡೆದಿದ್ದಾರೆ. ದೇಶದ ವಿವಿಧೆಡೆಯಿಂದ ಗಣ್ಯರು ಕೂಡ ಆಗಮಿಸುತ್ತಿರುವ ಹಿನ್ನಲೆಯಲ್ಲಿ ಮುನ್ನಚ್ಚರಿಕೆ ಕ್ರಮವಾಗಿ ಬಿಗಿಭದ್ರತೆ ಕೈಗೊಳ್ಳಲಾಗಿದೆ.

ಸಂಜೆ 4 ಗಂಟೆಯವರೆಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, 4.30 ರ ನಂತರ ಅಂತ್ಯಸಂಸ್ಕಾರ ನಡೆಸಲಾಗುವುದು. ತಮಿಳುನಾಡಿನ ರಾಜಕೀಯ, ಚಿತ್ರರಂಗ ಸೇರಿದಂತೆ ಹಲವು ಕ್ಷೇತ್ರಗಳ ಗಣ್ಯರು ಅಂತಿಮ ದರ್ಶನ ಪಡೆದಿದ್ದಾರೆ.

ಅಂತ್ಯಸಂಸ್ಕಾರದಲ್ಲಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ, ಪ್ರಧಾನಿ ನರೇಂದ್ರ ಮೋದಿ, ಎ.ಐ.ಸಿ.ಸಿ. ಉಪಾಧ್ಯಕ್ಷ ರಾಹುಲ್ ಗಾಂಧಿ, ಕೇಂದ್ರ ಸಚಿವ ವೆಂಕಯ್ಯ ನಾಯ್ಡು, ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಸೇರಿದಂತೆ ಹಲವು ಗಣ್ಯರು ಪಾಲ್ಗೊಳ್ಳಲಿದ್ದಾರೆ ಎನ್ನಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...