alex Certify
ಕನ್ನಡ ದುನಿಯಾ       Mobile App
       

Kannada Duniya

ಸದ್ಯದಲ್ಲೇ ಜಯಲಲಿತಾ ಡಿಸ್ಚಾರ್ಜ್

cm-cm-tn-tn-fr

ಚೆನ್ನೈ: ಅನಾರೋಗ್ಯದಿಂದ ಚೆನ್ನೈನ ಅಪೊಲೊ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ, ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರ ಆರೋಗ್ಯದಲ್ಲಿ ಸುಧಾರಣೆ ಕಂಡು ಬಂದಿದ್ದು, ಸದ್ಯದಲ್ಲೇ ಡಿಸ್ಚಾರ್ಜ್ ಆಗಲಿದ್ದಾರೆ.

ಜಯಲಲಿತಾ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ಅವರು ತಮ್ಮ ಸುತ್ತಮುತ್ತ ಏನಾಗುತ್ತಿದೆ ಎಂಬುದನ್ನು ಗ್ರಹಿಸುತ್ತಿದ್ದಾರೆ ಎಂದು ಅಪೊಲೊ ಆಸ್ಪತ್ರೆ ಅಧ್ಯಕ್ಷ ಡಾ. ಸಿ. ಪ್ರತಾಪ್ ರೆಡ್ಡಿ ತಿಳಿಸಿದ್ದಾರೆ. ಜಯಲಲಿತಾ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಚೇತರಿಕೆ ಕಂಡು ಬಂದಿರುವುದರಿಂದ ಮನೆಗೆ ತೆರಳಲು ಉತ್ಸುಕರಾಗಿದ್ದಾರೆ ಎಂದು ಪ್ರತಾಪ್ ರೆಡ್ಡಿ ಅವರು ಮಾಹಿತಿ ನೀಡಿದ್ದಾರೆ.

ಕಳೆದ ಸೆಪ್ಟಂಬರ್ 22 ರಿಂದ ಚೆನ್ನೈನ ಅಪೊಲೊ ಆಸ್ಪತ್ರೆಗೆ ದಾಖಲಾಗಿರುವ ಜಯಲಲಿತಾ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ. ತಜ್ಞ ವೈದ್ಯರು ಚಿಕಿತ್ಸೆ ನೀಡಿದ್ದು, ಆರೋಗ್ಯದಲ್ಲಿ ಸುಧಾರಣೆ ಕಂಡು ಬಂದಿದೆ.

ಜಯಲಲಿತಾ ಅವರ ಚೇತರಿಕೆಗೆ ಎ.ಐ.ಎ.ಡಿ.ಎಂ.ಕೆ. ಪಕ್ಷದ ಕಾರ್ಯಕರ್ತರು, ಬೆಂಬಲಿಗರು ಪೂಜೆ, ಪ್ರಾರ್ಥನೆ ಸಲ್ಲಿಸಿ, ಹರಕೆ, ಕಾಣಿಕೆ ಸಲ್ಲಿಸಿದ್ದರು. ಜಯಲಲಿತಾ ಅನುಪಸ್ಥಿತಿಯಲ್ಲಿ ಹಣಕಾಸು ಸಚಿವ ಪನ್ನೀರ್ ಸೆಲ್ವಂ ಆಡಳಿತ ನಡೆಸುತ್ತಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...