alex Certify
ಕನ್ನಡ ದುನಿಯಾ       Mobile App
       

Kannada Duniya

ಹಾಜರಾತಿ ನೀಡದ ಶಿಕ್ಷಕನನ್ನು ಹತ್ಯೆಗೈದ ವಿದ್ಯಾರ್ಥಿಗಳು

downloadಶಾಲೆಗೆ ಗೈರು ಹಾಜರಾಗುತ್ತಿದ್ದ ವಿದ್ಯಾರ್ಥಿಗಳು, ಶಿಕ್ಷಕ ಪರೀಕ್ಷೆಗೆ ಕುಳಿತುಕೊಳ್ಳಲು ಅನುಮತಿ ನೀಡಲಿಲ್ಲ ಎಂಬ ಕಾರಣಕ್ಕೆ ಹತ್ಯೆ ಮಾಡಿದ ಘಟನೆ ಪಶ್ಚಿಮ ದೆಹಲಿಯ ನಾಂಗಲೋಯಿಯಲ್ಲಿ ನಡೆದಿದೆ.

ನಾಂಗಲೋಯಿಯ ಸರ್ಕಾರಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಇಬ್ಬರು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಸೋಮವಾರ ಸಂಜೆ 5.30 ರ ಸುಮಾರಿಗೆ ಶಿಕ್ಷಕರಾದ ಮುಕೇಶ್ ಕುಮಾರ್ ಅವರನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾರೆ.

ವಿದ್ಯಾರ್ಥಿಗಳು ಕಾಲೇಜಿಗೆ ಗೈರುಹಾಜರಾಗುತ್ತಿದ್ದ ಕಾರಣ ಅವರನ್ನು ಕಾಲೇಜಿನಿಂದ ತೆಗೆದು ಹಾಕಲಾಗಿತ್ತು ಎನ್ನಲಾಗಿದೆ. ಕಾಲೇಜಿಗೆ ಬರದಿದ್ದರೂ ಹಾಜರಾತಿ ನೀಡಬೇಕೆಂಬ ಬೇಡಿಕೆಯನ್ನು ವಿದ್ಯಾರ್ಥಿಗಳು ಶಿಕ್ಷಕರ ಮುಂದಿಟ್ಟಿದ್ದರು. ಇದಕ್ಕೆ ಒಪ್ಪಿಗೆ ನೀಡದ ಶಿಕ್ಷಕ ಮುಕೇಶ್, ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಕುಳಿತುಕೊಳ್ಳಲು ಅವಕಾಶ ನೀಡಿರಲಿಲ್ಲ.

ಸೋಮವಾರ ಕಾಲೇಜಿನಲ್ಲಿ ಅರ್ಥಶಾಸ್ತ್ರದ ಪರೀಕ್ಷೆ ನಡೆದಿತ್ತು. ಪರೀಕ್ಷೆ ಮುಗಿಸಿ ಉತ್ತರ ಪತ್ರಿಕೆಗಳನ್ನು ಕಲೆಹಾಕುತ್ತಿದ್ದ ಮುಕೇಶ್ ಕುಮಾರ್ ಅವರ ಮೇಲೆ ಹಲ್ಲೆ ಮಾಡಿದ ವಿದ್ಯಾರ್ಥಿಗಳು ಚಾಕುವಿನಿಂದ ಹಲವಾರು ಬಾರಿ ಇರಿದು ಸ್ಥಳದಿಂದ ಪರಾರಿಯಾಗಿದ್ದಾರೆ ಎನ್ನಲಾಗಿದೆ. ಕೊಲೆಗೆ ಸಂಬಂಧಪಟ್ಟಂತೆ ಕೇಸ್ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...