alex Certify
ಕನ್ನಡ ದುನಿಯಾ       Mobile App
       

Kannada Duniya

ಶಾಲೆಯಲ್ಲೇ ಹುಡುಗಿಯರ ಬಟ್ಟೆ ಬಿಚ್ಚಿಸಿದ ಶಿಕ್ಷಕಿ

schol-girl

ರೂರ್ಕಿ: ಕಡಿಮೆ ಅಂಕ ತೆಗೆದ ಕಾರಣಕ್ಕೆ ತರಗತಿಯಲ್ಲೇ ವಿದ್ಯಾರ್ಥಿನಿಯರಿಬ್ಬರ ಬಟ್ಟೆ ಬಿಚ್ಚಿಸಿದ ವಿಲಕ್ಷಣ ಘಟನೆ ಉತ್ತರಾಖಂಡದಲ್ಲಿ ನಡೆದಿದೆ.

ರೂರ್ಕಿಯಿಂದ 8 ಕಿಲೋ ಮೀಟರ್ ದೂರದಲ್ಲಿರುವ ಲ್ಯಾಂಡೌರಾದ ಶಾಲೆಯೊಂದರಲ್ಲಿ 6 ನೇ ತರಗತಿಯ ಇಬ್ಬರು ವಿದ್ಯಾರ್ಥಿನಿಯರು ಇಂಗ್ಲಿಷ್ ವಿಷಯದಲ್ಲಿ ಕಡಿಮೆ ಮಾರ್ಕ್ಸ್ ತೆಗೆದಿದ್ದಾರೆ.

ಇವರನ್ನು ತರಗತಿಯಲ್ಲಿ ನಿಲ್ಲಿಸಿದ ಶಿಕ್ಷಕಿ, ದಂಡಿಸುವ ನೆಪದಲ್ಲಿ ವಿದ್ಯಾರ್ಥಿನಿಯರ ಬಟ್ಟೆ ತೆಗೆಸಿದ್ದಾರೆ. ವಿದ್ಯಾರ್ಥಿನಿಯರು ಮನೆಗೆ ಬಂದ ಬಳಿಕ ಪೋಷಕರಿಗೆ ಮಾಹಿತಿ ನೀಡಿದ್ದಾರೆ.

ವಿಷಯ ತಿಳಿದು ಬೇರೆ ಪೋಷಕರೂ ಒಂದುಗೂಡಿ ಶಾಲೆಯ ಆಡಳಿತ ಮಂಡಳಿ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ.

ಪೋಷಕರ ಪ್ರತಿಭಟನೆಯಿಂದಾಗಿ ಉದ್ವಿಗ್ನ ಸ್ಥಿತಿ ಉಂಟಾಗಿದ್ದು, ಪೊಲೀಸರು ಮಧ್ಯಪ್ರವೇಶಿಸಿ ಪರಿಸ್ಥಿತಿ ತಿಳಿಗೊಳಿಸಿದ್ದಾರೆ.

ಶಿಕ್ಷಣ ಇಲಾಖೆ ಅಧಿಕಾರಿಗಳು ಕೂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...