alex Certify
ಕನ್ನಡ ದುನಿಯಾ       Mobile App
       

Kannada Duniya

ಶಾಕಿಂಗ್ ನ್ಯೂಸ್! ಪ್ರತಿಭಟನೆಯಲ್ಲಿ ಶಿಕ್ಷಕಿಯರಿಂದ ಕೇಶಮುಂಡನ

ಭೋಪಾಲ್: ವೇತನ ಹೆಚ್ಚಳ ಸೇರಿದಂತೆ ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮಹಾರಾಷ್ಟ್ರದಲ್ಲಿ ಶಿಕ್ಷಕರು ಪ್ರತಿಭಟನೆ ಕೈಗೊಂಡಿದ್ದಾರೆ.

ನಿರಂತರವಾಗಿ ಹೋರಾಟ ನಡೆಸುತ್ತಿದ್ದರೂ, ಸರ್ಕಾರ ಸ್ಪಂದಿಸದ ಹಿನ್ನಲೆಯಲ್ಲಿ ಆಕ್ರೋಶಗೊಂಡ ಶಿಕ್ಷಕರು ಭೋಪಾಲ್ ನಲ್ಲಿ ಹೋರಾಟದ ಸ್ಥಳದಲ್ಲೇ ಕೇಶಮುಂಡನ ಮಾಡಿಸಿಕೊಂಡಿದ್ದಾರೆ. ಶಿಕ್ಷಕಿಯರು ಕೂಡ ಕೇಶಮುಂಡನ ಮಾಡಿಸಿಕೊಂಡು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಮಾನ ಕೆಲಸಕ್ಕೆ ಸಮಾನ ವೇತನಕ್ಕಾಗಿ ಅಧ್ಯಾಪಕ್ ಅಧಿಕಾರ್ ಯಾತ್ರ ಹೆಸರಲ್ಲಿ ಹೋರಾಟ ಕೈಗೊಳ್ಳಲಾಗಿದೆ. ವೇತನ ಹೆಚ್ಚಳ, ವರ್ಗಾವಣೆ ನೀತಿ ಮೊದಲಾದ ವಿಷಯಗಳನ್ನಿಟ್ಟುಕೊಂಡು ಶಿಕ್ಷಕರು ಹೋರಾಟ ನಡೆಸುತ್ತಿದ್ದು, ಇಂದು ಹೋರಾಟದ ಸ್ಥಳದಲ್ಲೇ ಶಿಕ್ಷಕಿಯರು ಕೇಶಮುಂಡನ ಮಾಡಿಸಿಕೊಂಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಗುಜರಾತ್ ಫಲಿತಾಂಶ ಕರ್ನಾಟಕ ವಿಧಾನಸಭಾ ಚುನಾವಣೆ ಮೇಲೆ ಪರಿಣಾಮ ಬೀರಲಿದೆಯೇ...?

    View Results

    Loading ... Loading ...