alex Certify
ಕನ್ನಡ ದುನಿಯಾ       Mobile App
       

Kannada Duniya

ಪೊಲೀಸ್ ಕೆಲಸಕ್ಕೆ ಅರ್ಜಿ ಹಾಕಿದ 487 ಕ್ರಿಮಿನಲ್ ಗಳು

telanga

ಹೈದರಾಬಾದ್: ತೆಲಂಗಾಣ ಸರ್ಕಾರ ಖಾಲಿ ಇರುವ ಪೊಲೀಸ್ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಿದ್ದು, ಪೊಲೀಸ್ ಇಲಾಖೆಯ ಮೂಲಕ ನೇಮಕಾತಿ ಪ್ರಕ್ರಿಯೆ ಆರಂಭವಾಗಿ ಪ್ರಗತಿಯಲ್ಲಿದೆ. ಈ ಸಂದರ್ಭದಲ್ಲಿ ಆತಂಕದ ಮಾಹಿತಿ ಹೊರಬಿದ್ದಿದೆ.

ಸಾವಿರಾರು ಸಂಖ್ಯೆಯಲ್ಲಿ ಅಭ್ಯರ್ಥಿಗಳು ಉದ್ಯೋಗಕ್ಕಾಗಿ ಅರ್ಜಿ ಸಲ್ಲಿಸಿದ್ದಾರೆ. ಹೀಗೆ ಅರ್ಜಿ ಸಲ್ಲಿಸಿದ ಎಲ್ಲಾ ಅಭ್ಯರ್ಥಿಗಳ ದಾಖಲೆಗಳನ್ನು ಪರಿಶೀಲನೆ ಮಾಡಲಾಗಿದೆ. ವೆರಿಫೈ 24X7ಇ-ವೆರಿಫಿಕೇಷನ್ ಮೂಲಕ ಅಭ್ಯರ್ಥಿಗಳ ದಾಖಲೆ ಪರಿಶೀಲನೆ ಮಾಡಲಾಗಿದೆ. ಈ ಸಂದರ್ಭದಲ್ಲಿ 487 ಅಭ್ಯರ್ಥಿಗಳು ಕ್ರಿಮಿನಲ್ ಹಿನ್ನಲೆಯಿಂದ ಬಂದವರು ಎಂಬುದು ಗೊತ್ತಾಗಿದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವಾಗ ಈ ಮಾಹಿತಿಯನ್ನು ನೀಡಿರಲಿಲ್ಲ.

ಪೊಲೀಸ್ ಇಲಾಖೆಗೆ ನೇಮಕಾತಿ ಮಾಡಿಕೊಳ್ಳುವ ಮೊದಲು ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. ಕೆಲಸಕ್ಕೆ ಸೇರುವವರ ಪೂರ್ವಪರ ಪರಿಗಣಿಸಲಾಗುವುದು. ಆದರೆ, ಅರ್ಜಿ ಸಲ್ಲಿಸಿದವರಲ್ಲಿ 487 ಮಂದಿ ಕ್ರಿಮಿನಲ್ ಗಳಾಗಿದ್ದಾರೆ ಎಂದು ನೇಮಕಾತಿ ವಿಭಾಗದ ಅಧಿಕಾರಿಯೊಬ್ಬರು ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...