alex Certify
ಕನ್ನಡ ದುನಿಯಾ       Mobile App
       

Kannada Duniya

ನೌಕರರಿಗೆ ನಗದು ರಹಿತ ವ್ಯವಹಾರದ ಮಾಹಿತಿ

telangann-sunm

ಹೈದರಾಬಾದ್: ದೇಶದಲ್ಲಿ ದೊಡ್ಡ ಮೊತ್ತದ ನೋಟ್ ಬ್ಯಾನ್ ಮಾಡಿದ ಬಳಿಕ, ನಗದು ರಹಿತ ವ್ಯವಹಾರಕ್ಕೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ.

ತೆಲಂಗಾಣ ಸರ್ಕಾರವೂ ನಗದು ರಹಿತ ವ್ಯವಹಾರ ಅಳವಡಿಸಿಕೊಳ್ಳುವ ನಿಟ್ಟಿನಲ್ಲಿ ಮೊದಲ ಹೆಜ್ಜೆಯಾಗಿ ಸರ್ಕಾರಿ ನೌಕರರಿಗೆ ಜಾಗೃತಿ ಕಾರ್ಯಕ್ರಮ ಹಮ್ಮಿಕೊಂಡಿದೆ. ಸಚಿವಾಲಯದ ನೂರಾರು ಸಿಬ್ಬಂದಿಗೆ ಏರ್ಪಡಿಸಿದ್ದ ಡಿಜಿಟಲ್ ಫೈನಾನ್ಸಿಯಲ್ ಲಿಟರಸಿ ಕ್ಯಾಂಪ್ ನಲ್ಲಿ ಬ್ಯಾಂಕ್ ಅಧಿಕಾರಿಗಳು ನಗದು ರಹಿತ ವ್ಯವಹಾರದ ಮಾಹಿತಿ ನೀಡಿದ್ದಾರೆ. ತೆಲಂಗಾಣ ಸರ್ಕಾರದ ಮುಖ್ಯ ಸಲಹೆಗಾರ ಡಾ. ರಾಜೀವ್ ಶರ್ಮ, ಮುಖ್ಯ ಕಾರ್ಯದರ್ಶಿ ಕೆ. ಪ್ರದೀಪ್ ಚಂದ್ರ ಅವರು, ಈ ಯೋಜನೆಗೆ ಚಾಲನೆ ನೀಡಿದ್ದಾರೆ.

ನೌಕರರು ನಗದು ರಹಿತ ವ್ಯವಹಾರ, ಹಣಕಾಸು ಸುರಕ್ಷತೆ ಸೇರಿದಂತೆ ವಿವಿಧ ವಿಷಯಗಳ ಮಾಹಿತಿ ಪಡೆದುಕೊಂಡು, ತಮ್ಮ ಅನುಮಾನಗಳನ್ನು ಪರಿಹರಿಸಿಕೊಂಡಿದ್ದಾರೆ. ಮುಂದಿನ ದಿನಗಳಲ್ಲಿ ರಾಜ್ಯದೆಲ್ಲೆಡೆ ನಗದು ರಹಿತ ವ್ಯವಹಾರದ ಬಗ್ಗೆ ಕಾರ್ಯಾಗಾರ ಏರ್ಪಡಿಸಲಾಗುವುದು. ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದು ಕೆ. ಪ್ರದೀಪ್ ಚಂದ್ರ ತಿಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...