alex Certify
ಕನ್ನಡ ದುನಿಯಾ       Mobile App
       

Kannada Duniya

ತೆಲಂಗಾಣ ಸರ್ಕಾರದಿಂದ ಶಾಸಕರಿಗೆ ಭರ್ಜರಿ ಗಿಫ್ಟ್

telangana cmಮುಖ್ಯಮಂತ್ರಿ ಚಂದ್ರಶೇಖರ ರಾವ್ ನೇತೃತ್ವದ ತೆಲಂಗಾಣ ರಾಜ್ಯ ಸರ್ಕಾರ ಅಲ್ಲಿನ ಎಲ್ಲ ಶಾಸಕರು ಹಾಗೂ ವಿಧಾನಪರಿಷತ್ ಸದಸ್ಯರಿಗೆ ಭರ್ಜರಿ ಗಿಫ್ಟ್ ನೀಡುತ್ತಿದೆ. ಇದಕ್ಕಾಗಿ ಸುಮಾರು 1.50 ಕೋಟಿ ರೂ. ಗಳನ್ನು ಮೀಸಲಿರಿಸಲಾಗಿದೆ.

ಸಚಿವರೂ ಸೇರಿದಂತೆ 120 ಶಾಸಕರು ಹಾಗೂ 40 ಮಂದಿ ವಿಧಾನ ಪರಿಷತ್ ಸದಸ್ಯರುಗಳಿಗೆ ಹಣಕಾಸು ಇಲಾಖೆಯಿಂದ ಗಿಫ್ಟ್ ಕೂಪನ್ ಗಳನ್ನು ನೀಡಲಾಗುತ್ತಿದ್ದು, ಇದರ ಮೂಲಕ ಐ ಫೋನ್ ಹಾಗೂ ಐ ಪಾಡ್ ಪಡೆದುಕೊಳ್ಳಬಹುದಾಗಿದೆ. ಜೊತೆಗೆ ಹಣಕಾಸು ಸಚಿವ ರಾಜೇಂದ್ರನ್ ಶಾಸಕರುಗಳಿಗೆ ಭಾರೀ ಔತಣ ಕೂಟವನ್ನು ಏರ್ಪಡಿಸಿದ್ದಾರೆ.

ಸರ್ಕಾರದ ಈ ನಡೆಗೆ ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗಿದ್ದು, ಈಗಾಗಲೇ ಶಾಸಕರುಗಳು ಹಲವಾರು ಸೌಲಭ್ಯಗಳನ್ನು ಪಡೆಯುತ್ತಿದ್ದಾರೆ. ಇದರ ಮಧ್ಯೆ ಸರ್ಕಾರದ ಬೊಕ್ಕಸಕ್ಕೆ ಹೊರೆ ಬರುವ ಇಂತಹ ಗಿಫ್ಟ್ ಅವಶ್ಯಕತೆಯೇನಿತ್ತು ಎಂದು ಪ್ರಶ್ನಿಸಲಾಗುತ್ತಿದೆ. ಆದರೆ ತನ್ನ ತೀರ್ಮಾನವನ್ನು ಸಮರ್ಥಿಸಿಕೊಂಡಿರುವ ಸರ್ಕಾರ, ಈ ಹಿಂದೆಯೇ ಇಂತಹ ಗಿಫ್ಟ್ ನೀಡಿದ ಉದಾಹರಣೆಗಳಿವೆ ಎಂದು ಹೇಳಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...