alex Certify
ಕನ್ನಡ ದುನಿಯಾ       Mobile App
       

Kannada Duniya

3 ಗಂಟೆ ಅವಧಿಯಲ್ಲಿ ನಡೆದಿತ್ತಲ್ಲಿ ಭಾರೀ ದಂಧೆ..!

old-notesಕಪ್ಪು ಹಣಕ್ಕೆ ಕಡಿವಾಣ ಹಾಕಲು ಮುಂದಾಗಿರುವ ಕೇಂದ್ರ ಸರ್ಕಾರ, ನವೆಂಬರ್ 8 ರಿಂದ 500 ಹಾಗೂ 1000 ರೂ. ಮುಖಬೆಲೆ ನೋಟುಗಳ ಚಲಾವಣೆಯನ್ನು ರದ್ದುಗೊಳಿಸಿದೆ. ಪ್ರಧಾನಿ ನರೇಂದ್ರ ಮೋದಿಯವರು ನೋಟು ನಿಷೇಧದ ಘೋಷಣೆ ಹೊರಡಿಸಿದ ದಿನದಿಂದ ಇಂದಿನವರೆಗೂ ಕಾಳಧನಿಕರು ತಮ್ಮಲ್ಲಿರುವ ಕಪ್ಪುಹಣವನ್ನು ವಾಮಮಾರ್ಗದ ಮೂಲಕ ಬಿಳಿ ಹಣವನ್ನಾಗಿ ಪರಿವರ್ತಿಸಿಕೊಂಡಿರುವ ಹಲವು ಘಟನೆಗಳು ಬೆಳಕಿಗೆ ಬಂದಿವೆ.

ಹೈದರಾಬಾದ್ ನ ಪ್ರತಿಷ್ಟಿತ ಆಭರಣ ಮಾರಾಟ ಮಳಿಗೆಯೊಂದರ ಮೇಲೆ ದಾಳಿ ನಡೆಸಿರುವ ಆದಾಯ ತೆರಿಗೆ ಅಧಿಕಾರಿಗಳು ಪರಿಶೀಲನೆ ವೇಳೆ ನವೆಂಬರ್ 8 ರ ರಾತ್ರಿ 9 ಗಂಟೆಯಿಂದ ಮಧ್ಯ ರಾತ್ರಿ 12 ಗಂಟೆವರೆಗೆ ಹಳೆ 500 ಹಾಗೂ 1000 ರೂ. ನೋಟುಗಳಲ್ಲಿ 5000 ವಹಿವಾಟು ನಡೆಸಿರುವ ಅಂಶ ಕಂಡು ಬಂದಿದೆ.

2 ಲಕ್ಷಕ್ಕಿಂತಲೂ ಅಧಿಕ ಮೊತ್ತದ ನಗದು ವಹಿವಾಟು ನಡೆದರೆ ಖರೀದಿದಾರರ ಪಾನ್ ನಂಬರ್, ವೈಯಕ್ತಿಕ ಮಾಹಿತಿಗಳನ್ನು ಪಡೆಯುವುದು ಕಡ್ಡಾಯವಾಗಿದ್ದು, ಇದ್ಯಾವುದನ್ನು ಆಭರಣ ಅಂಗಡಿಯವರು ಪಾಲಿಸಿಲ್ಲವೆನ್ನಲಾಗಿದೆ. ಜೊತೆಗೆ ಐಟಿ ಅಧಿಕಾರಿಗಳು ಆ ದಿನದ ಸಿಸಿ ಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ ಬೆರಳೆಣಿಕೆಯಷ್ಟು ಮಂದಿ ಮಾತ್ರ ಅಂಗಡಿಯಲ್ಲಿರುವುದು ಕಂಡು ಬಂದಿದೆ. ಈ ಅಂಗಡಿ ಮಾಲೀಕ ನವೆಂಬರ್ 10 ರಿಂದ ನವೆಂಬರ್ 17 ರ ಅವಧಿಯಲ್ಲಿ ಸುಮಾರು 100 ಕೋಟಿ ರೂ. ಮೌಲ್ಯದ ಹಳೆ ನೋಟುಗಳನ್ನು ಬ್ಯಾಂಕ್ ನಲ್ಲಿ ಜಮಾ ಮಾಡಿದ್ದು, ವಾಮಮಾರ್ಗದ ಮೂಲಕ ಕಪ್ಪು ಹಣವನ್ನು ಬಿಳಿ ಹಣವನ್ನಾಗಿ ಪರಿವರ್ತಿಸಿಕೊಂಡಿರುವ ಶಂಕೆಯ ಹಿನ್ನಲೆಯಲ್ಲಿ ತನಿಖೆ ನಡೆದಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...