alex Certify
ಕನ್ನಡ ದುನಿಯಾ       Mobile App
       

Kannada Duniya

ಶಾಕಿಂಗ್! ಶಾಸಕನಾಗಿ ಆಯ್ಕೆಯಾಗಿದ್ದ ಜರ್ಮನ್ ಪ್ರಜೆ

ಜರ್ಮನ್ ಪಾಸ್ ಪೋರ್ಟ್ ಹೊಂದಿದ್ದ ವ್ಯಕ್ತಿ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಪ್ರಕರಣ ಬೆಳಕಿಗೆ ಬಂದಿದ್ದು, ಭಾರತೀಯ ಪೌರತ್ವ ಪಡೆಯಲು ನಕಲಿ ದಾಖಲೆ ಸಲ್ಲಿಸಿರುವುದೂ ಪತ್ತೆಯಾಗಿದೆ. ಇದೀಗ ಈತನ ಭಾರತೀಯ ಪೌರತ್ವವನ್ನು ರದ್ದುಗೊಳಿಸಲಾಗಿದೆ.

ತೆಲಂಗಾಣದ ಕರೀಂ ನಗರ ಜಿಲ್ಲೆಯ ವೇಮುಲಾವಾಡಾ ಕ್ಷೇತ್ರದ ಶಾಸಕ ರಮೇಶ್ ಚನ್ನಮನೇನಿ ಭಾರತೀಯ ಪೌರತ್ವ ಕಳೆದುಕೊಂಡವರಾಗಿದ್ದಾರೆ. 2009 ರಲ್ಲಿ ಅವಿಭಜಿತ ಆಂಧ್ರ ಪ್ರದೇಶದಲ್ಲಿ ತೆಲುಗು ದೇಶಂ ಪಾರ್ಟಿಯಿಂದ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗಿದ್ದ ರಮೇಶ್ ಚನ್ನಮನೇನಿ ಬಳಿಕ ತೆಲಂಗಾಣ ರಾಷ್ಟ್ರ ಸಮಿತಿಗೆ ಪಕ್ಷಾಂತರಗೊಂಡಿದ್ದರು.

ಚುನಾವಣಾ ಫಲಿತಾಂಶದ ಬಳಿಕ ಕೆಲವರು ರಮೇಶ್ ಚನ್ನಮನೇನಿಯವರ ಪೌರತ್ವ ಪ್ರಶ್ನಿಸಿ ಕೋರ್ಟ್ ಮೆಟ್ಟಿಲೇರಿದ್ದರು. ರಮೇಶ್ ಚನ್ನಮನೇನಿ ಜರ್ಮನ್ ಪಾಸ್ ಪೋರ್ಟ್ ಹೊಂದಿದ್ದು, ಅವರು ಭಾರತೀಯ ಪೌರತ್ವ ಪಡೆಯುವ ಅವಕಾಶಗಳಿಲ್ಲ. ಕಾನೂನಿನ್ವಯ ವಿದೇಶಿ ಪ್ರಜೆಗೆ ಚುನಾವಣೆಗೆ ಸ್ಪರ್ಧಿಸುವುದಿರಲಿ ಮತ ಹಾಕುವ ಅಧಿಕಾರವೂ ಇಲ್ಲ ಎಂದು ವಾದಿಸಿದ್ದರು.

ಪ್ರಕರಣದ ವಿಚಾರಣೆ ನಡೆಸಿದ್ದ ಹೈಕೋರ್ಟ್ 2013 ರಲ್ಲಿ ರಮೇಶ್ ಚನ್ನಮನೇನಿಯವರ ಶಾಸಕತ್ವವನ್ನು ರದ್ದುಗೊಳಿಸಿತ್ತು. ಇದನ್ನು ಪ್ರಶ್ನಿಸಿ ಸುಪ್ರೀಂ ಕೊರ್ಟ್ ಮೆಟ್ಟಿಲೇರಿದ್ದ ರಮೇಶ್ ತಡೆಯಾಜ್ಞೆ ತಂದಿದ್ದರಲ್ಲದೇ 2014 ರ ವಿಧಾನಸಭಾ ಚುನಾವಣೆಯಲ್ಲಿ ಟಿ ಆರ್ ಎಸ್ ಶಾಸಕರಾಗಿ ಮತ್ತೊಮ್ಮೆ ಆಯ್ಕೆಯಾಗಿದ್ದರು. ಪ್ರಕರಣದ ವಿಚಾರಣೆ ಸುಪ್ರೀಂ ಕೋರ್ಟ್ ನಲ್ಲಿ ನಡೆದಿದ್ದು, ರಮೇಶ್ ಪೌರತ್ವ ಕುರಿತು ಮಾಹಿತಿ ನೀಡುವಂತೆ ಕೇಂದ್ರ ಗೃಹ ಇಲಾಖೆಗೆ ಸೂಚನೆ ನೀಡಿತ್ತು.

ಇದೀಗ ಕೇಂದ್ರ ಗೃಹ ಸಚಿವಾಲಯ ರಮೇಶ್ ಚನ್ನಮನೇನಿಯವರ ಭಾರತೀಯ ಪೌರತ್ವವನ್ನು ರದ್ದುಗೊಳಿಸಿದೆ. ಅಲ್ಲದೇ ಅವರು ಜರ್ಮನ್ ಪೌರತ್ವ ಹೊಂದಿರುವುದಾಗಿ ನ್ಯಾಯಾಲಯಕ್ಕೆ ಮಾಹಿತಿ ನೀಡಿದೆ. ರಮೇಶ್ ಚನ್ನಮನೇನಿ ಈಗ ಶಾಸಕ ಸ್ಥಾನ ಕಳೆದುಕೊಳ್ಳುವುದಲ್ಲದೇ ತಪ್ಪು ಮಾಹಿತಿ ನೀಡಿದ ಕಾರಣಕ್ಕೆ ವಿಚಾರಣೆಯನ್ನೂ ಎದುರಿಸುವ ಸಾಧ್ಯತೆಯಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...