alex Certify
ಕನ್ನಡ ದುನಿಯಾ       Mobile App
       

Kannada Duniya

ವ್ಯಕ್ತಿಯನ್ನು ಕೊಂದ ಆರೋಪ ಹೊತ್ತಿದ್ದ ಪೊಲೀಸ್ ಆತ್ಮಹತ್ಯೆ

ವ್ಯಕ್ತಿಯೊಬ್ಬನ ತಳ್ಳಿ ಕೊಲೆಗೈದ ಆರೋಪ ಹೊತ್ತಿದ್ದ ಕೇರಳದ ನೆಯ್ಯತ್ತಿಕರದ ಡೆಪ್ಯುಟಿ ಸುಪರಿಂಟೆಂಡೆಂಟ್ ಆಫ್ ಪೊಲೀಸ್ (ಡಿಎಸ್‌ಪಿ) ಬಿ ಹರಿಕುಮಾರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಳಮಬಲಂನಲ್ಲಿರುವ ಅವರ ನಿವಾಸದಲ್ಲಿ ಮೃತದೇಹ ಪತ್ತೆಯಾಗಿದೆ.

ನ.5ರಂದು ನೆಯ್ಯತ್ತಿಕರದಲ್ಲಿ ರಸ್ತೆ ಬದಿಯಲ್ಲಿ ಕಾರು ಪಾರ್ಕ್ ಮಾಡಿದ್ದ ವಿಚಾರಕ್ಕೆ 32 ವರ್ಷದ ಸನಲ್ ಕುಮಾರ್ ಎಂಬ ವ್ಯಕ್ತಿಯೊಂದಿಗೆ ಹರಿಕುಮಾರ್ ವಾಗ್ವಾದ ನಡೆಸಿದ್ದರು. ಮಾತಿಗೆ ಮಾತು ಬೆಳೆದು ಸನಲ್‌ನನ್ನು ಹರಿಕುಮಾರ್ ರಸ್ತೆಯತ್ತ ತಳ್ಳಿದರು ಎಂದು ಆರೋಪಿಸಲಾಗಿತ್ತು. ಚಲಿಸುತ್ತಿರುವ ಕಾರಿನ ಅಡಿಗೆ ಬಿದ್ದ ಸನಲ್ ತೀವ್ರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದ.

ಈ ಘಟನೆ ಮಾಧ್ಯಮಗಳಲ್ಲಿ ವರದಿಯಾಗುತ್ತಿದ್ದಂತೆ, ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಪೊಲೀಸ್ ಅಧಿಕಾರಿ ಹರಿಕುಮಾರ್‌ರನ್ನು ಅಮಾನತುಗೊಳಿಸಲಾಗಿದೆ. ಘಟನೆಯ ಕುರಿತು ಎಎಸ್‌ಪಿ ತನಿಖೆ ನಡೆಸಲಿದ್ದಾರೆ ಎಂದಿದ್ದರು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...