alex Certify
ಕನ್ನಡ ದುನಿಯಾ       Mobile App
       

Kannada Duniya

ಟ್ರಕ್ ಡಿಕ್ಕಿಯಾಗಿ ಆಟೋದಲ್ಲಿದ್ದ 6 ಮಂದಿ ಸಾವು

ಆಸೀಫಾಬಾದ್: ತೆಲಂಗಾಣದ ಆಸೀಫಾಬಾದ್ ನಲ್ಲಿ ನಡೆದ ಭೀಕರ ಅಪಘಾತದಲ್ಲಿ 6 ಮಂದಿ ಸಾವನ್ನಪ್ಪಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಮೃತರೆಲ್ಲರೂ ಆಸೀಫಾಬಾದ್ ನಿವಾಸಿಗಳಾಗಿದ್ದು, ಆಟೋದಲ್ಲಿ ಪ್ರಯಾಣಿಸುವಾಗ, ಚಂದ್ರಾಪುರ ಕಡೆಯಿಂದ ಬಂದ ಟ್ರಕ್ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.

ಲಾರಿ ಚಾಲಕನ ಅತಿವೇಗದ ಮತ್ತು ಅಜಾಗರೂಕತೆಯ ಚಾಲನೆಯೇ ಅಪಘಾತಕ್ಕೆ ಕಾರಣವೆನ್ನಲಾಗಿದೆ. ಸುದ್ದಿ ತಿಳಿದ ಕೂಡಲೇ, ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಸ್ಥಳೀಯರ ನೆರವಿನಿಂದ ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಿದ್ದಾರೆ.

ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...