alex Certify
ಕನ್ನಡ ದುನಿಯಾ       Mobile App
       

Kannada Duniya

ಪರೀಕ್ಷಾ ವಿಧಾನ ವಿರೋಧಿಸಿ ಬೀದಿಗಿಳಿದ ವಿದ್ಯಾರ್ಥಿಗಳು

exam

ಹೊಸ ಪರೀಕ್ಷಾ ವಿಧಾನ ವಿರೋಧಿಸಿ ತೆಲಂಗಾಣ ವಿದ್ಯಾರ್ಥಿಗಳು ಬೀದಿಗಿಳಿದಿದ್ದಾರೆ. ಒಸ್ಮಾನಿಯಾ ವಿಶ್ವವಿದ್ಯಾನಿಲಯದ ಆರ್ಟ್ಸ್ ಕಾಲೇಜಿನ ಬಳಿ ಜಮಾಯಿಸಿದ ವಿದ್ಯಾರ್ಥಿಗಳು, ಹೊಸ ವಿಧಾನದಿಂದ ಪೂರ್ವಾಗ್ರಹ ಹುಟ್ಟಿಕೊಳ್ಳುತ್ತದೆ ಎಂದು ಆರೋಪಿಸಿ ಪ್ರತಿಭಟಿಸಿದ್ರು.

ಈ ಮೊದಲು ಓಎಂಆರ್ ಶೀಟ್ ಮೇಲಿರುವ ರೋಲ್ ನಂಬರ್ ಮತ್ತು ಆನ್ಸರ್ ಶೀಟನ್ನು ಮೌಲ್ಯಮಾಪನಕ್ಕೆ ಕಳುಹಿಸುವಾಗ ಬೇರ್ಪಡಿಸಲಾಗುತ್ತಿತ್ತು. ಆದ್ರೆ ಈಗ ಪರೀಕ್ಷಾ ಹಾಳೆಯ ಮೇಲೆ ಎಲ್ಲವೂ ಇರುವುದರಿಂದ ಅಭ್ಯರ್ಥಿಯ ಆಯ್ಕೆ ವೇಳೆ ಪಕ್ಷಪಾತಕ್ಕೆ ಕಾರಣವಾಗಬಹುದು ಅನ್ನೋದು ವಿದ್ಯಾರ್ಥಿಗಳ ಅಭಿಪ್ರಾಯ.

ಇದಕ್ಕೆ ಪ್ರತಿಕ್ರಿಯಿಸಿರುವ ತೆಲಂಗಾಣ ಸ್ಟೇಟ್ ಪಬ್ಲಿಕ್ ಸರ್ವಿಸ್ ಕಮಿಷನ್, ಹೊಸ ಮಾದರಿಯಿಂದ ಅಭ್ಯರ್ಥಿಗಳ ಆಯ್ಕೆಯಲ್ಲಿ ಯಾವುದೇ ರೀತಿಯ ತಾರತಮ್ಯವಾಗುವುದಿಲ್ಲ ಎಂದು ಹೇಳಿದೆ. ಬಯೋಮೆಟ್ರಿಕ್ ಹಾಜರಾತಿಯಲ್ಲಿ ಕೂಡ ತೊಂದರೆಯಿದ್ದು, ಇದರಿಂದ ಹಲವು ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳಿಗೆ ಸಮಸ್ಯೆಯುಂಟಾಗುತ್ತಿದೆ.

 

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...