alex Certify
ಕನ್ನಡ ದುನಿಯಾ       Mobile App
       

Kannada Duniya

ಶ್ರೀನಗರ ಆಸ್ಪತ್ರೆ ಮೇಲೆ ಭಯೋತ್ಪಾದಕರ ದಾಳಿ

ಜಮ್ಮು ಕಾಶ್ಮೀರದಲ್ಲಿ ಮತ್ತೆ ಉಗ್ರರು ಅಟ್ಟಹಾಸ ಮೆರೆದಿದ್ದಾರೆ. ಎಸ್ ಎಂ ಹೆಚ್ ಎಸ್ ಆಸ್ಪತ್ರೆ ಮೇಲೆ ದಾಳಿ ನಡೆಸಿದ್ದಾರೆ. ಆಸ್ಪತ್ರೆ ಒಳಗೆ ದಾಳಿ ನಡೆದಿದೆ.

ಘಟನೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಹುತಾತ್ಮರಾಗಿದ್ದು, ಅನೇಕ ಸಿಬ್ಬಂದಿ ಗಾಯಗೊಂಡಿದ್ದಾರೆ. ದಾಳಿ ನಂತ್ರ ಆಸ್ಪತ್ರೆ ಬಳಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ದಾಳಿ ವೇಳೆ ಭಯತ್ಪಾದಕನೊಬ್ಬ ತಪ್ಪಿಸಿಕೊಂಡಿದ್ದಾನೆ. ವೈದ್ಯಕೀಯ ತಪಾಸಣೆಗಾಗಿ ಭಯೋತ್ಪಾದಕರನ್ನು ಆಸ್ಪತ್ರೆಗೆ ಕರೆತರಲಾಗಿತ್ತು.

ವೈದ್ಯಕೀಯ ತಪಾಸಣೆ ವೇಳೆ ಭಯೋತ್ಪಾದಕನೊಬ್ಬನನ್ನು ರಕ್ಷಿಸಲು ಭಯೋತ್ಪಾದಕರ ತಂಡ ಈ ದಾಳಿ ನಡೆಸಿದೆ ಎಂದು ಮೂಲಗಳು ಹೇಳಿವೆ. ಇದೊಂದು ದುರದೃಷ್ಟಕರ ಘಟನೆ ಎಂದು ಮಾಜಿ ಜನರಲ್ ಜಿ.ಡಿ. ಬಕ್ಷಿ ಹೇಳಿದ್ದಾರೆ. ಪಾಕಿಸ್ತಾನಿ ಭಯೋತ್ಪಾದಕರಿಗೆ ವೈದ್ಯಕೀಯ ಚಿಕಿತ್ಸೆ ಅಗತ್ಯವಿರುತ್ತದೆ. ಆದ್ರೆ ಚಿಕಿತ್ಸೆ ವೇಳೆ ಇಂಥ ಘಟನೆಗಳು ನಡೆಯುತ್ತವೆ ಎಂದವರು ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...